ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಮನವರಿಕೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು.

ಸೌಹಾರ್ದ ಭೇಟಿಯ ವೇಳೆ, “ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು” ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಭರವಸೆ ನೀಡಿದ್ದಾರೆ.

ಚುನಾವಣೆಗೂ ಮೊದಲು ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆಯ ರೂಪ ನೀಡಿ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ ಜಾರಿಯಾಗಿರುವ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್‌ ಮತ್ತು ಅಂತ್ಯೋದಯ ಕಾರ್ಡುದಾರ ಕುಟುಂಬದ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿ ಮಾತ್ರ ವಿಳಂಬವಾಗಿದೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಅನ್ನ ಭಾಗ್ಯ ಯೋಜನೆ ಜಾರಿಗೆ ತೊಡಕಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಮುಂದಾಗಿದ್ದರು. ಆದರೆ, ಪ್ರಧಾನಿ ನೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿ ಇರುವ ಕಾರಣ ಕೇಂದ್ರ ಗೃಹ ಸಚಿವ ಅಮೀತ್‌ ಶಾ ಅವರನ್ನು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ ಆಗುತ್ತಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪೊಳ್ಳು ಭರವಸೆ ಕೊಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದೆಷ್ಟು ಸರಿ: ಎಚ್‌ಡಿಕೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Download Eedina App Android / iOS

X