ನೂತನ ದಾಖಲೆ ಹೊಸ್ತಿಲಿನಲ್ಲಿ ಸಿಎಂ ಸಿದ್ದರಾಮಯ್ಯ; ಜುಲೈ 3ರಿಂದ ಬಜೆಟ್ ಅಧಿವೇಶನ

Date:

  • ಜುಲೈ 3ರಿಂದ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನ
  • ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಐದನೇ ದಿನ, ಅಂದರೆ ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಜೆಟ್ ಮಂಡನೆ ಮೂಲಕ ಸಿಎಂ ಸಿದ್ದರಾಮಯ್ಯ ರಾಜ್ಯದ ಪರ ಅತೀ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವರಾಗಲಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ ಸಿಎಂ ಸಿದ್ದರಾಮಯ್ಯ ಜುಲೈ3ರಿಂದ ಸದನ ಆರಂಭವಾಗಲಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮೂರು ದಿನಗಳ ಕಾಲ ಇದರ ಮೇಲೆ ಚರ್ಚೆ ನಡೆಯಲಿದೆ. ಇದಾದ ಬಳಿಕ ನಾನು ಬಜೆಟ್ ಮಂಡನೆ ಮಾಡಲಿದ್ದೇನೆ ಎಂದು ಹೇಳಿದರು.

ರಾಜ್ಯವನ್ನು ಅಭಿವೃದ್ದಿ ಹಳಿಗೆ ತೆಗೆದುಕೊಂಡು ಹೋಗುವ ಹಾಗೂ ಜನಪ್ರಗತಿಶೀಲ ಬಜೆಟ್ ಮಂಡನೆ ಮಾಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ವಿದ್ಯುತ್ ದುರುಪಯೋಗ ಮಾಡುವಂತೆ ಕುಮ್ಮಕ್ಕು ಕೊಡುತ್ತಿದೆ, ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲವೆಂಬ ಭರವಸೆ ಇದೆ : ಸಿಎಂ

ಇದೇ ವೇಳೆ ಪಶು ಸಂಗೋಪನಾ ಸಚಿವ ವೆಂಕಟೇಶ್ ನೀಡಿದ್ದ ಗೋ ವಧೆ ವಿಚಾರದ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ನಮಗೂ ದನಕರುಗಳ ಮೇಲೆ ಗೌರವವಿದೆ. ಆದರೆ ಹನ್ನೆರಡು ವರ್ಷ ಮೀರಿದ ರಾಸುಗಳನ್ನು ವಧೆ ಮಾಡಲು ಅವಕಾಶವನ್ನು ಕಾನೂನು ಕಲ್ಪಿಸಿದೆ.

1964ರ ಕಾಯ್ದೆ ಉಲ್ಲೇಖ ಮಾಡದೆ ವೆಂಕಟೇಶ್ ಹಾಗೆಯೇ ಮಾಹಿತಿ ಕೊಟ್ಟಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಗೋ ವಧೆ ಕಾನೂನು ಹಿಂಪಡೆಯುವುದರ ಬಗ್ಗೆ ಚರ್ಚಿಸುವುದಾಗಿ ಅವರು ಸ್ಪಷ್ಟೀಕರಣ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...