ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ನಡುವೆ ಅಶ್ಲೀಲ ಸಿ.ಡಿಗಳ ಬಗ್ಗೆ ಮಾತನಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, “ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಸಿ.ಡಿಗಳೂ ಬರಬಹುದು” ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಮಾತನಾಡಿದ ಅವರು, “ಪ್ರಜ್ವಲ್ ಪ್ರರಕಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಡಿಯೋ ಬಗ್ಗೆ ಚರ್ಚೆಯಾಗುತ್ತಿದೆ. ನನ್ನ ಪ್ರಕರಣದಲ್ಲಿಯೂ ಡಿ.ಕೆ ಶಿವಕುಮಾರ್ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ. ಈ ಸಾಕ್ಷ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲ್ಲ” ಎಂದಿದ್ದಾರೆ. ಈ ಹಿಂದೆ, ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದವು.
“ಮೊದಲಿನಿಂದಲೂ ನಾನು ಸಿ.ಡಿ ಬಗ್ಗೆ ಹೇಳುತ್ತಲೇ ಬಂದಿದ್ದೆ. ಆಗ ನನ್ನ ಹೇಳಿಕೆಗಳನ್ನು ನಿರ್ಲಕ್ಷ್ಯಿಸಲಾಗಿತ್ತು. ಈಗ ಒಬ್ಬರದ್ದು ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ. ಪರಮೇಶ್ವರ್ ಅವರದ್ದೂ ಬರಬಹುದು.
“ನನ್ನ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ಪ್ರಶ್ನಾರ್ಥಕ ಚಿಹ್ನೆ ಇದೆ. ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ” ಎಂದು ಹೇಳಿದ್ದಾರೆ.