ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬಲಿಷ್ಠ ಕಾಯ್ದೆ ಶೀಘ್ರ ಜಾರಿ: ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಯಿತು.

- Advertisement -

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ ಎಂದಿದ್ದಾರೆ.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ. ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...