ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ, ಕಾದು ನೋಡಿ: ಬಿ ವೈ ವಿಜಯೇಂದ್ರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಪ್ರಕರಣ ಸಂಬಂಧ ರಾಜೀನಾಮೆ ಕೊಡಲೇಬೇಕಾಗುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ಸೆ.4) ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, “ಅಧಿಕಾರಿ ಅಮಾನತಿನ ಮೂಲಕ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಸರಕಾರವು ಮೊದಲ ಬಾರಿಗೆ ಮುಡಾ ಹಗರಣ ನಡೆದುದನ್ನು ಒಪ್ಪಿಕೊಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಪ್ಪು ತಿಂದವರು ನೀರು ಕುಡಿಯಬೇಕು

“ಉಪ್ಪು ತಿಂದವರು ನೀರು ಕುಡಿಯಲೇ ಬೇಕಾಗುತ್ತದೆ. ವಾಲ್ಮೀಕಿ ನಿಗಮದ ಹಗರಣ ಆದಾಗ ಮತ್ತು ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಾಗ ಮುಖ್ಯಮಂತ್ರಿಗಳು ಸರಕಾರದಲ್ಲಿ ಯಾವುದೇ ಹಗರಣ ಆಗಿಲ್ಲ ಎಂದಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ಆಗಿದ್ದನ್ನು ಸದನದಲ್ಲಿ ಒಪ್ಪಿಕೊಂಡಿದ್ದರು” ಎಂದರು.

“ಮುಡಾದಲ್ಲಿ ಹಗರಣ ಆಗಿಲ್ಲ; ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ತದನಂತರ ಸಿಎಂ ಆರೋಪಿಸಿದ್ದರು. ಈಗ ಪ್ರಕರಣ ಕೋರ್ಟಿನಲ್ಲಿದ್ದು, ಮುಡಾದ ಹಿಂದಿನ ಕಮೀಷನರ್ ಅನ್ನು ಅಮಾನತು ಮಾಡಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.

ಮಹಾನ್‌ ನಾಯಕ ಎಲ್ಲಿ?

“ಕಾಂಗ್ರೆಸ್‌ನ ಕೆಲವು ಮುಖಂಡರು ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಅವರ ಮಹಾನ್‌ ನಾಯಕ ಡಿ ಕೆ ಶಿವಕುಮಾರ್ ಎಲ್ಲಿದ್ದರು” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

“ಯಾಕೆ ಡಿ ಕೆ ಶಿವಕುಮಾರ್ ಇರಲಿಲ್ಲ? ಯಾಕೆ ಮುಖ್ಯಮಂತ್ರಿಗಳು ಬರಲಿಲ್ಲ? ಯಾಕೆ ನಿಮ್ಮ ಸರಕಾರದ ಇತರ ಹಿರಿಯ ಸಚಿವರು ಬರಲಿಲ್ಲ? ಈ ವಿಷಯಕ್ಕೆ ಪ್ರಿಯಾಂಕ್ ಖರ್ಗೆ ಉತ್ತರಿಸಲಿ” ಎಂದು ಆಗ್ರಹಿಸಿದರು.

“ನಮ್ಮ ಪಕ್ಷದ ಮುಖಂಡ ಛಲವಾದಿ ನಾರಾಯಣಸ್ವಾಮಿಯವರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಹಗರಣಗಳಲ್ಲಿ ಮುಳುಗಿದ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರಕಾರವು ತನ್ನನ್ನು ತಾನು ಕಾಪಾಡಲು ಮತ್ತು ಭ್ರಷ್ಟಾಚಾರದಿಂದ ನುಣುಚಿಕೊಳ್ಳಲು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದೆ” ಎಂದು ಟೀಕಿಸಿದರು.

“ನಾನು ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ರಾಜ್ಯದ ಚನ್ನಪಟ್ಟಣ ಮತ್ತಿತರ ಕ್ಷೇತ್ರಗಳ ಉಪ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇನೆ. ಯೋಗೇಶ್ವರ್ ಅವರು ಚನ್ನಪಟ್ಟಣ ಅಭ್ಯರ್ಥಿ ಆಗುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...