ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳು ಇಂದಿನಿಂದಲೇ ಜಾರಿ: ಸಿಎಂ ಸಿದ್ದರಾಮಯ್ಯ

Date:

  • ಶನಿವಾರ ಕ್ಯಾಬಿನೆಟ್‌ ಸಭೆಯಲ್ಲಿ ಅಂಗೀಕರಿಸಿ, ಆದೇಶ ಹೊರಡಿಸಲಾಗುವುದು
  • ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಎಲ್ಲರಿಗೂ ಧನ್ಯವಾದ

ಚುನಾವಣೆಗೂ ಮೊದಲು ಕಾಂಗ್ರೆಸ್‌ ಜನರಿಗೆ ಕೊಟ್ಟ ಐದು ಗ್ಯಾರಂಟಿಗಳನ್ನೂ ಇವತ್ತೇ ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಕೊಡುವ ಮೂಲಕ ಆದೇಶ ಹೊರಡಿಸಿ, ಜಾರಿಗೊಳಿಸಲಾಗುವುದು. ಇದು ಕನ್ನಡಿಗರಿಗೆ ಹೊಸ ಸರ್ಕಾರ ನೀಡುವ ವಾಗ್ದಾನ, ಅದನ್ನು ಮಾಡಿಯೇ ತೀರುತ್ತೇವೆ” ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತವನ್ನು ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದಾರೆ ಎಂದರು.

“ಜೊತೆಗೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಹಿಂದೆಯೂ ಈಡೇರಿಸಿ ನುಡಿದಂತೆ ನಡೆಸಿದ್ದೇವೆ. ಈ ಬಾರಿಯೂ ಐದು ವರ್ಷಗಳಲ್ಲಿ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ” ಎಂದು ಹೇಳಿದರು.

“ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸಿಕ್ಕಿರುವ ಜಯ, ಇದು ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿರುವ ಜಯ. ನಾಡಿನ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭವಾಯಿತು. ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ರಾಷ್ಟ್ರ ನಾಯಕರು ಪ್ರಚಾರ ಮಾಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

“ನಾಡಿನ ಸಾಹಿತಿಗಳು, ಚಿಂತಕರು, ಸಂಘಟನೆಗಳ ನಾಯಕರು ಸಹಕಾರ ನೀಡಿದ್ದಾರೆ. ರಾಜ್ಯದ ಮಹಿಳೆಯರು, ಯುವಕರು, ರೈತರು, ಕಾರ್ಮಿಕರಿಗೆ ಧನ್ಯವಾದ ಹೇಳಲೇ ಬೇಕು. ವಿಶೇಷವಾಗಿ ಕನ್ನಡ ನಾಡಿನ ಎಲ್ಲ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು – ಸವದಿ ಸಚಿವರಾಗಬೇಕಿತ್ತು ಎನ್ನುವುದು ಜನರ ಅಭಿಲಾಷೆಯಾಗಿತ್ತು : ಜಗದೀಶ ಶೆಟ್ಟರ್

ಸಚಿವ ಸ್ಥಾನಕ್ಕೆ ನಾನೆಂದೂ ಬೇಡಿಕೆ ಇಟ್ಟಿಲ್ಲ, ಇಡುವುದೂ ಇಲ್ಲ ಯಾವುದೇ ಸ್ಥಾನ ಕೊಟ್ಟರೂ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ...

ಕರ್ನಾಟಕದ ಜಯವನ್ನು ಮಧ್ಯಪ್ರದೇಶದಲ್ಲಿ ಪುನರಾವರ್ತಿಸಲಿದ್ದೇವೆ: ರಾಹುಲ್ ಗಾಂಧಿ

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಹಿರಿಯ ನಾಯಕರು...

ನೀತಿ ಆಯೋಗದ ಸಭೆಗೆ ಹಾಜರಾಗದೆ ಕರ್ನಾಟಕಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ : ಬಿಜೆಪಿ

ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ...