ನಾನು ಜಾತಿ ವಿರೋಧಿ ಅಲ್ಲ, ಸಾಮಾಜಿಕ ನ್ಯಾಯದ ಪರ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ’
  • ‘ಜಾತಿಯಿಂದಲೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ’

ವೈಚಾರಿಕ, ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ವತಿಯಿಂದ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ 20ನೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಜ್ಞಾನ ವಿಕಾಸವಾಗಲು ಶಿಕ್ಷಣ ಅಗತ್ಯ. ನಾವೂ ಅನಕ್ಷರಸ್ಥರಂತೆ ನಡೆದುಕೊಳ್ಳುವುದಾದರೆ ಶಿಕ್ಷಣದ ಅಗತ್ಯವೇ ಇಲ್ಲ. ಸಮಾಜದಲ್ಲಿ ಜಾತಿ ವ್ಯವಸ್ಥೆಯಿದೆ. ಜಾತಿಯಿಂದಲೇ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯಿದೆ. ಶೂದ್ರರು, ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು. ಸಮಾಜದಲ್ಲಿ ಅವಕಾಶಗಳಿಂದ, ನ್ಯಾಯದಿಂದ ವಂಚಿತರಾಗಿದ್ದರೆ, ಅವರ ಪರಿಸ್ಥಿತಿಯನ್ನು ಸುಧಾರಿಸಬೇಕು” ಎಂದರು.

Advertisements

“ವೈಚಾರಿಕ, ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯಗಳು, ಕಂದಾಚಾರದಿಂದ ಸಮಾಜದ ಹಿನ್ನಡೆಯಾಗಿದೆ. ಶಿಕ್ಷಿತರು ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಬೇಕು. ಚಲನೆಯಿಲ್ಲದ ಸಾಮಾಜಿಕ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣದಿಂದ ಸಮಾಜಕ್ಕೆ ಚಲನೆ ದೊರೆತು ಆರ್ಥಿಕ, ಸಾಮಾಜಿಕ ಸಬಲತೆ ಸಾಧ್ಯವಾಗುತ್ತದೆ. ಇಂತಹ ಶಿಕ್ಷಣ, ಕಾಲೇಜುಗಳಲ್ಲಿ ದೊರೆಯಬೇಕು. ವಿಜ್ಞಾನದ ಜೊತೆಗೆ ಮೌಢ್ಯ, ಕಂದಾಚಾರಗಳಿಗೆ ಅವಕಾಶವಿಲ್ಲ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನ ಶಿಕ್ಷಣವಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

ನಾನು ಸಾಮಾಜಿಕ ನ್ಯಾಯದ ಪರ

“ಜಾತಿವಿರೋಧಿ ಎಂಬ ಆರೋಪ ನನ್ನ ಮೇಲಿದೆ. ಆದರೆ ನಾನು ಯಾವ ಜಾತಿಯ ವಿರೋಧಿಯೂ ಅಲ್ಲ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು, ಮನುಷ್ಯ ಜಾತಿಯ ಪರವಾಗಿದ್ದೇನೆ. ಕುವೆಂಪು ಹೇಳಿದಂತೆ, ಹುಟ್ಟುವಾಗ ಎಲ್ಲರೂ ವಿಶ್ವಮಾನವರಾಗಿದ್ದು, ಬೆಳೆದಂತೆ ಅಲ್ಪಮಾನವರಾಗುತ್ತೇವೆ. ನಾವೆಲ್ಲರೂ ವಿಶ್ವಮಾನವರಾಗಿಯೇ ಉಳಿದುಕೊಳ್ಳುವುದೇ ಶಿಕ್ಷಣದ ಗುರಿಯಾಗಬೇಕು. ಸಂವಿಧಾನದ ವಿರುದ್ಧ ಮಾತನಾಡುವವರಿಗೆ ಕೆಲವು ವಿದ್ಯಾವಂತರು ಚಪ್ಪಾಳೆ ತಟ್ಟುವುದು ವಿಷಾದನೀಯ. ಅವಕಾಶವಂಚಿತರಿಗೆ ಸಮಾನತೆಯ ಅವಕಾಶ ದೊರಕಿಸಿಕೊಡುವುದೇ ಶಿಕ್ಷಣದ ಗುರಿಯಾಗಬೇಕು” ಎಂದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅನನ್ಯ 

“ಹಳೆಯ ವಿದ್ಯಾರ್ಥಿ ಸಂಘಕ್ಕೆ 20ನೇ ವರ್ಷದ ಸಮಾರಂಭಕ್ಕೆ ನಾನು ಹಳೆಯ ವಿದ್ಯಾರ್ಥಿಯಾಗಿ ಭಾಗವಹಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಶತಮಾನ ಕಳೆದಿದೆ. ಶಿಕ್ಷಣ ಸಂಸ್ಥೆ, ಕೈಗಾರಿಕೆ, ಕಲೆ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರ ಹೀಗೆ ಮೈಸೂರಿನ ಸರ್ವತೋಮುಖ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣರಾಗಿದ್ದಾರೆ. ಆ ಕಾಲದಲ್ಲಿ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್, ಸರ್.ಎಂ.ವಿಶ್ವೇಶ್ವರಯ್ಯ ಬಹಳ ಪ್ರಗತಿಪರರಾಗಿದ್ದರು. ಕೆಆರ್ ಎಸ್ ಜಲಾಶಯ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂವಿ ಅವರ ಕನಸಿನ ಯೋಜನೆ. ಕಾವೇರಿ ನೀರು ನಮಗೆ ದೊರೆಯದೇ, ಮಂಡ್ಯದಲ್ಲಿ ಕಬ್ಬು, ಭತ್ತ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಡಾ.ಅಂಬೇಡ್ಕರ್ ಅವರು ’ಇತಿಹಾಸ ತಿಳಿಯದವರು ಭವಿಷ್ಯ ನಿರ್ಮಿಸಲು ಸಾಧ್ಯವಿಲ್ಲ’ ಎಂದಿದ್ದರು.

ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜವಾದಿ ಸಭಾವನ್ನು ಸೇರಿಕೊಳ್ಳುವ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭವಾಯಿತು ಎಂದ ವಿವರಿಸುತ್ತಿದ್ದಾಗ, ‘ಹಣೆಯ ಬರಹವೇ ಕಾರಣ’ ಎಂದು ವೇದಿಕೆಯಲ್ಲಿದ್ದ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರ ಹೇಳಿಕೆಗೆ ವೇದಿಕೆಯಲ್ಲೇ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಣೆಯ ಬರಹವನ್ನು ಯಾರೂ ಬರೆಯುವುದಿಲ್ಲ. ವಿಜ್ಞಾನ ಓದಿದರೂ ವೈಜ್ಞಾನಿಕ ಚಿಂತನೆಯಿಲ್ಲದಿರುವುದೇ ಇಂದಿನ ದುರಂತ. ಇದಕ್ಕೆ ಹಣೆಯ ಬರಹ ಕಾರಣವಲ್ಲ, ದೊರೆತ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಜೀವನದಲ್ಲಿ ಮುಂದೆ ಬರಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X