ಸ್ಮಾರಕಗಳ ರಕ್ಷಣೆಯಿಂದ ಮುಂದಿನ ಪೀಳಿಗೆಗೆ ಇತಿಹಾಸ, ಪರಂಪರೆ ದಾಟಿಸಬಹುದು: ಸಿದ್ದರಾಮಯ್ಯ

Date:

Advertisements
  • ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎಂಬ ಮಾತು ಮರೆಯಬಾರದು
  • ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ

ಇತಿಹಾಸ ತಿಳಿಯದವರು ಭವಿಷ್ಯ ರೂಪಿಸಲಾರರು ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು. ನಮ್ಮ ಇತಿಹಾಸ, ಪರಂಪರೆಯನ್ನು ಈಗಿನ ಪೀಳಿಗೆಗೆ ಅರ್ಥ ಮಾಡಿಸಲು, ಮುಂದಿನ ತಲೆಮಾರುಗಳಿಗೆ ನಮ್ಮತನದ ಮಹತ್ವ ಸಾರಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಪ್ರವಾಸೋದ್ಯಮ ಮತ್ತು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ “ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ” ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ನಾಡಿನ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಸ್ಮಾರಕಗಳ ರಕ್ಷಣೆಗೆ ಸರ್ಕಾರದ ಜತೆಗೆ ಸಾರ್ವಜನಿಕರು ಕೈ ಜೋಡಿಸಿದರೆ, ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸಬಹುದು” ಎಂದರು.

Advertisements

“ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆಸಲು ಸಾಕಷ್ಟು ಅವಕಾಶಗಳಿವೆ. ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸಿ ಕೇಂದ್ರಗಳಿಗೆ, ದೇವಾಲಯಗಳಿಗೆ ಬಡವರೂ ಹೋಗಲು ಅವಕಾಶ ಕಲ್ಪಿಸಬೇಕು ಎನ್ನುವ ಕಾಳಜಿ “ಶಕ್ತಿ” ಯೋಜನೆಯ ಹಿಂದಿದೆ. 60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆದು ದೇವಸ್ಥಾನಗಳ ಆದಾಯ ಹೆಚ್ಚಾಗಿದೆ. ಆರ್ಥಿಕತೆಗೆ ಚೈತನ್ಯ ಬಂದು ವ್ಯಾಪಾರ, ವಹಿವಾಟು ಹೆಚ್ಚಾಗಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಶಕ್ತಿ ಯೋಜನೆ ಹಿಂದೆ ಇಷ್ಟೆಲ್ಲಾ ಕಾಳಜಿಗಳು ಕೆಲಸ ಮಾಡಿವೆ. ಕೇವಲ ಚುನಾವಣೆ ಕಾರಣಕ್ಕೆ ಮಾಡಿದ್ದಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಪೌರಕಾರ್ಮಿಕರು ಪರಮಶೋಷಿತರು; ಸರ್ಕಾರ, ನಾವು-ನೀವು, ಎಲ್ಲರೂ ಕಾರಣ

ವಿಶ್ವ ಪರಂಪರೆ ತಾಣವೆಂದು ಘೋಷಿಸಲಾದ ಹೊಯ್ಸಳರ ವಾಸ್ತುಶಿಲ್ಪಿಯ ಸಮಗ್ರ ಭಾಗಗಳನ್ನು ಇನ್ ಟ್ಯಾಕ್ ಸಂಸ್ಥೆ ವತಿಯಿಂದ ಪ್ರಸ್ತುತ ಪಡಿಸಲಾಯಿತು. ಬ್ರಿಗೇಡ್ ಸಂಸ್ಥೆಯೊಂದಿಗೆ ವೆಂಕಟಪ್ಪ ಚಿತ್ರಶಾಲೆಯ ನವೀಕರಣ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಕಲ್ಕಿ ಸಂಸ್ಥೆಗೆ ಯೋಜನಾ ನಿರ್ವಹಣೆ ಘಟಕದ ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ, ಸಂರಕ್ಷಣಾ ಸ್ಮಾರಕಗಳ ಯೋಜನೆಗೆ ಒಳಪಡಲು ಆಸಕ್ತಿ ವ್ಯಕ್ತಪಡಿಸಿದ ಸಂಸ್ಥೆಗಳಿಗೆ ಆಶಯಪತ್ರ ವಿತರಿಸಲಾಯಿತು.

ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಸ್ಟಾರ್ಟ್ ಅಪ್ ವಿಜನ್ ಗ್ರೂಪ್ ಮತ್ತು ಕಲ್ಕಿ ಫೌಂಡೇಶನ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಲಾಖೆ ನಿರ್ದೇಶಕರಾದ ವಿ.ರಾಮ್ ಪ್ರಸಾತ್ ಮನೋಹರ್, ಇಲಾಖೆಯ ಆಯುಕ್ತರಾದ ಎ.ದೇವರಾಜು ಸೇರಿ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X