ಬಿಜೆಪಿ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆ: ಸಿಎಂ ಸಿದ್ದರಾಮಯ್ಯ

Date:

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ವೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು” ಎಂದು ಹೇಳಿದ್ದಾರೆ.

“ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ (ನನ್ನ ಪ್ರೀತಿಯ ಸಹೋದರ, ಸಹೋದರಿಯರೇ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ” ಎಂದು ಟೀಕಿಸಿದರು.

“ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ” ಎಂದಿದ್ದಾರೆ.

“ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...