ಬಜೆಟ್ 23-24 | ಬೆಂಗಳೂರಿನ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೈಗಾರಿಕಾ ಕ್ಷೇತ್ರಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.

- Advertisement -

ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ಕರ್ನಾಟಕದ ಅಗ್ರಸ್ಥಾನವನ್ನು ಮುಂದುವರೆಸಲು ಪೂರಕವಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್‌ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಆವಿಷ್ಕಾರ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುರಾವೆಯಿದ್ದೂ ಬಹಿರಂಗಗೊಳಿಸದೆ ಇರುವವರ ಆರೋಪಗಳು ಅನೈತಿಕ

ಆವಿಷ್ಕಾರ ಪಾರ್ಕ್‌ನಲ್ಲಿ ತಾಂತ್ರಿಕ ಸಂಶೋಧನಾ ಸಂಸ್ಥೆಯ ಸ್ಥಾಪನೆ ಜೊತೆಗೆ ಸೆಮಿಕಂಡಕ್ಟರ್‌ ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ವಿನ್ಯಾಸ ಇತ್ಯಾದಿಗಳಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು.

ಇನ್ನುಳಿದಂತೆ ಕೈಗಾರಿಕಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳು ಇಂತಿವೆ

  • ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ ಬಿಇಎಂಎಲ್ ಜಮೀನಿನಲ್ಲಿ ಬೃಹತ್‌ ʻಕೈಗಾರಿಕಾ ಟೌನ್‌ಷಿಪ್ʼ ಅಭಿವೃದ್ಧಿ.
  • ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್‌ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳ ಅಭಿವೃದ್ಧಿ.
  • ಏರೋಸ್ಪೇಸ್‌ ವಲಯದಲ್ಲಿ ರಾಜ್ಯದ ಬಲವನ್ನು ಮತ್ತಷ್ಟು ವೃದ್ಧಿಸಲು ಮತ್ತು ವಿಶೇಷವಾಗಿ ಎಂಎಸ್‌ಎಂಇಗಳ ಮೇಲೆ ಕೇಂದ್ರಿಕರಿಸಲು, ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರವನ್ನು ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಸ್ಥಾಪನೆ.
  • ರಾಜ್ಯದಲ್ಲಿ ಸಾಮಾನ್ಯ ಸೌಲಭ್ಯ ಕೇಂದ್ರಗಳನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಯೋಜಿಸಿದ್ದು, ಇದರಿಂದ ಯಂತ್ರೋಪಕರಣಗಳು, ಉಪಕರಣಗಳು ಮತ್ತು ಸಾಮೂಹಿಕ ಮೂಲಸೌಲಭ್ಯಗಳನ್ನು ಎಂಎಸ್‌ಎಂಇಗಳು ಉಪಯೋಗಿಸಿಕೊಳ್ಳಬಹುದಾಗಿದೆ. 
  • ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪನೆ.
  • ಪರಿಸರ ಸ್ನೇಹಿ ಹಾಗೂ ನೈಸರ್ಗಿಕ ಕೈಮಗ್ಗದ ವಸ್ತ್ರಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆಯಲ್ಲಿ ಕೈಮಗ್ಗ ವಲಯದಲ್ಲಿ ಸುಸ್ಥಿರ ಉದ್ಯೋಗ ಒದಗಿಸಲು ಸಾಕಷ್ಟು ಅವಕಾಶವಿದೆ. ಈ ಅವಕಾಶದ ಸದ್ಬಳಕೆಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿ ವಸ್ತ್ರೋದ್ಯಮ ಕೋಶ ಸ್ಥಾಪನೆ. ಈ ಕೋಶವು ವಿನ್ಯಾಸಕಾರರು, ನೇಕಾರರು, ನೂಲು ಬಿಚ್ಚಾಣಿಕೆದಾರರು, ಮತ್ತಿತರ ಭಾಗೀದಾರರನ್ನು ಒಂದೇ ವೇದಿಕೆಯಡಿ ತರುವುದರೊಂದಿಗೆ ಮಾರುಕಟ್ಟೆಯೊಂದಿಗೆ ಸಮನ್ವಯಗೊಳಿಸಲಿದೆ. ಅಲ್ಲದೇ, ಕುಸಿತ ಕಾಣುತ್ತಿರುವ ಕೈಮಗ್ಗ ಉದ್ಯಮದ ಪುನಃಶ್ಚೇತನಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. 
  • 10 ಹೆಚ್.ಪಿ ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ, ಮಾಸಿಕ ಗರಿಷ್ಠ 250 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಒದಗಿಸುವ ಮೂಲಕ ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಕ್ರಮ.
  • ರಾಜ್ಯದಲ್ಲಿ ಅಪರೂಪದ ಭೂ ಖನಿಜಾಂಶಗಳಲ್ಲಿ ಒಂದಾದ ಲೀಥಿಯಂ ಖನಿಜಾನ್ವೇಷಣೆಯನ್ನು ಕೈಗೊಂಡು ಹೊಸ ಖನಿಜ ನಿಕ್ಷೇಪಗಳನ್ನು ಪತ್ತೆಹಚ್ಚಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಕ್ರಮ.
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...