ರಾಜಕೀಯ ಪುಢಾರಿಯಂತೆ ಸುಳ್ಳು ಆರೋಪ ಮಾಡಿದ ಪ್ರಧಾನಿಯಿಂದ ಕನ್ನಡಿಗರಿಗೆ ಅವಮಾನ: ಸಿದ್ದರಾಮಯ್ಯ

Date:

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೋತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಢಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

- Advertisement -

ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಭರವಸೆ ನೀಡುವುದು ಸುಲಭ ಆದರೆ ಅವುಗಳನ್ನು ಸರಿಯಾಗಿ ಕಾರ್ಯಗತಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬ ಕಠಿಣ ಮಾರ್ಗವನ್ನು ಕಾಂಗ್ರೆಸ್ ಪಕ್ಷ ಅರಿತುಕೊಂಡಿದೆ. ಅವರು ನೀಡಿದ ಭರವಸೆಯನ್ನು ಎಂದಿಗೂ ಪೂರೈಸಲು ಸಾಧ್ಯವಾಗುವುದಿಲ್ಲ ಎಂಬುದು ಅವರಿಗೆ ತಿಳಿದಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಜೊತೆಗೆ, “ಇಂದು ಕಾಂಗ್ರೆಸ್ ಸರ್ಕಾರ ಹೊಂದಿರುವ ಯಾವುದೇ ರಾಜ್ಯವನ್ನು ಪರಿಶೀಲಿಸಿ- ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣವಾಗಲಿ ಕೆಟ್ಟದಾಗಿದ್ದ ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಸ್ಥಿತಿ ಹದಗೆಡುತ್ತಿದೆ” ಎಂದಿದ್ದರು. ಹಾಗೆಯೇ “ಕಾಂಗ್ರೆಸ್ ಪ್ರಾಯೋಜಿತ ನಕಲಿ ಗ್ಯಾರಂಟಿಯ ಸಂಸ್ಕೃತಿಯ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದು ಪೋಸ್ಟ್ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಒಳಮೀಸಲಾತಿ | ಆಯೋಗ ರಚನೆ ಹಿಂದೆ ಕಾಲಹರಣ ತಂತ್ರವಿಲ್ಲ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

“ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಲಭಿಸಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಸನ್ಮಾನ್ಯ ಮೋದಿ ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ – ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ₹52,903 ಕೋಟಿ ಅನುದಾನ ಬಳಸಲಾಗುತ್ತಿದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಶಕ್ತಿ ಯೋಜನೆಯಲ್ಲಿ ಯಾವ ಬದಲಾವಣೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ” ಎಂದು ಪ್ರಶ್ನಿಸಿದ್ದಾರೆ.

“ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು” ಎಂದು ವಿವರಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ ‘ತೂ ತೂ ಮೇ ಮೇ’ ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ” ಎಂದು ಸವಾಲೆಸೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...