ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ: ಸಿಎಂ ಲೇವಡಿ

Date:

ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪ್ರಚಾರದ ವೇಳೆ ಅತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ.

- Advertisement -

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕುಡ್ಲೂರು ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋತಿದ್ದ, ನಂತರ ರಾಮನಗರದಲ್ಲಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಈಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಇಲ್ಲಿ ಯೋಗೇಶ್ವರ್ ಗೆಲ್ಲುವುದು ಶತಸಿದ್ಧ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮಾಜಿ ಪ್ರಧಾನಿ ದೇವೇಗೌಡರು ಮೂರು-ನಾಲ್ಕು ದಿನಗಳಿಂದ ರಾಮನಗರದಲ್ಲಿ ಠಿಕಾಣಿ ಹೂಡಿದ್ದಾರೆ. ಹೇಗಾದರೂ ತಮ್ಮ ಮೊಮ್ಮಗನನ್ನು ಗೆಲ್ಲಿಸಬೇಕು ಎಂದು ಹೊರಟಿದ್ದಾರೆ. ಕಟುಗರಿಗೆ ಕಣ್ಣೀರು ಬರಲ್ಲ ಎಂದು ದೇವೇಗೌಡ್ರು ಹೇಳಿದರು. ಹಾಸನದಲ್ಲಿ ನಿಮ್ಮ ಮೊಮ್ಮಗನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನೂರಾರು ಹೆಣ್ಣುಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಅಲ್ಲಿ ಹೋಗಿ ಅಳಿ ದೇವೇಗೌಡರೇ. ಇಲ್ಲಿ ಅತ್ತರೆ ಏನು ಪ್ರಯೋಜನ” ಎಂದು ಸಿಎಂ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಲೋಕಾಯುಕ್ತ ವಿಚಾರಣೆ | ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

“ನಾವು ಈಗಾಗಲೇ ಕ್ಷೇತ್ರಕ್ಕೆ ರೂ. 500 ಕೋಟಿಗೂ ಹೆಚ್ಚು ಕೊಟ್ಟಿದ್ದೀವಿ. ಯೋಗೇಶ್ವರ್ ಗೆದ್ದ ಮೇಲೆ ಮತ್ತಷ್ಟು ಅನುದಾನ ನೀಡುತ್ತೇವೆ. ಇನ್ನೂ ಮೂರುವರೆ ವರ್ಷ ನಮ್ಮ ಸರ್ಕಾರವೇ ಇರುತ್ತದೆ. ಕುಮಾರಸ್ವಾಮಿ ಸರ್ಕಾರ ಬರಲ್ಲ. ಅನುದಾನ ನೀಡುವುದು ನಾನು ಮತ್ತು ಡಿ.ಕೆ. ಶಿವಕುಮಾರ್” ಎಂದು ಹೇಳಿದರು.

ಇನ್ನು “ಗ್ಯಾರಂಟಿ ಯೋಜನೆಯನ್ನು ಪರಿಷ್ಕರಣೆ ಮಾಡುತ್ತಾರೆ ಎಂದು ಬಿಜೆಪಿ- ಜೆಡಿಎಸ್ ಸುಳ್ಳು ಪ್ರಚಾರ ಮಾಡುತ್ತಿವೆ. ಕಾಂಗ್ರೆಸ್ ಸರ್ಕಾರ ಇರುವವರೆಗೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...