ಧರ್ಮಸ್ಥಳ ಪ್ರಕರಣ | ಎಸ್‌ಐಟಿ ರಚನೆ; ಪೊಲೀಸ್ ಇಲಾಖೆ ವರದಿ ಬಳಿಕ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವು ಮತ್ತು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಸದ್ಯಕ್ಕೆ ಇಲ್ಲ. ಈ ವಿಚಾರದಲ್ಲಿ ಯಾರ ಒತ್ತಡವೂ ಇಲ್ಲ, ಯಾರ ಒತ್ತಡಕ್ಕೂ ನಾವು ಮಣಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ಆಗಲಿ ಯಾರೇ ಆಗಲಿ, ನಾವು ಯಾರು ಹೇಳುವುದಕ್ಕೂ ಪರವೂ ಇಲ್ಲ ವಿರೋಧವೂ ಇಲ್ಲ. ಕಾನೂನು ಪ್ರಕಾರವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಕಾನೂನು ಪ್ರಕಾರವಾಗಿ ಸರ್ಕಾರಕ್ಕೆ ಎಸ್‌ಐಟಿ ಮಾಡಬೇಕು ಎಂದನಿಸಿದರೆ ಮಾಡುತ್ತೇವೆ. ಆದರೆ ಸದ್ಯಕ್ಕೆ ಎಸ್‌ಐಟಿ ರಚನೆಯಿಲ್ಲ. ಪೊಲೀಸ್ ಇಲಾಖೆ ಆಧಾರದ ಮೇಲೆ ಮಾಡಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

“ದೂರು ನೀಡಿದ ವ್ಯಕ್ತಿ ಹತ್ತು ವರ್ಷ ಪರಾರಿಯಾಗಿದ್ದ. ಪೊಲೀಸರಿಗೆ ಹೇಳಿಕೆ ನೀಡಿದ್ದು ತಾನೇ ಮೃತದೇಹ ಹೂತಿ ಹಾಕಿರುವುದಾಗಿ ಹೇಳಿದ್ದಾನೆ. ಸ್ಥಳ ತೋರಿಸುವುದಾಗಿಯೂ ಹೇಳಿದ್ದಾನೆ. ಪೊಲೀಸರು ಈ ಬಗ್ಗೆ ವರದಿ ನೀಡಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಈ ವಿಚಾರದಲ್ಲಿ ಎಸ್‌ಐಟಿ ರಚಿಸುವಂತೆ ಸರ್ಕಾರದ ಮೇಲೆ ಒತ್ತಡವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ “ಸರ್ಕಾರದ ಮೇಲೆ ಯಾವ ಒತ್ತಡವೂ ಇಲ್ಲ. ಒತ್ತಡ ಹಾಕಿದರೂ ನಾವು ಯಾರ ಮಾತನ್ನೂ ಕೇಳಲ್ಲ. ಕಾನೂನು ರೀತಿಯಲ್ಲಿ ಏನು ಮಾಡಬೇಕೊ ಅದನ್ನು ಮಾಡುತ್ತೇವೆ” ಎಂದು ಸ್ಪಷ್ಪಪಡಿಸಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸುವಂತೆ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಆಗ್ರಹಿಸಿದೆ. ಈ ಸಂಬಂಧ ಮಹಿಳಾ ಆಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಹಾಗೆಯೇ ಹಿರಿಯ ವಕೀಲರಾದ ಸಿಎಸ್‌ ದ್ವಾರಕನಾಥ್ ಮತ್ತು ಎಸ್‌ ಬಾಲನ್ ಅವರೂ ಸಿಎಂ ಭೇಟಿಯಾಗಿ ಎಸ್‌ಐಟಿ ರಚನೆ ಮನವಿ ಮಾಡಿದ್ದಾರೆ. ಈ ಸಂಬಂಧ ನಿನ್ನೆ(ಜುಲೈ 17) ಪತ್ರಿಕಾಗೋಷ್ಠಿಯನ್ನೂ ನಡೆಸಲಾಗಿದೆ. ಆದರೆ ಸದ್ಯ ಎಸ್‌ಐಟಿ ರಚನೆಯಿಲ್ಲ ಎಂದು ಸಿಎಂ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...