ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ

Date:

ಹೆಚ್‌ ಡಿ ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ದೇವೇಗೌಡರ ರಾಜಕೀಯ ನೆಲದಲ್ಲಿ ಗುಡುಗಿದರು.

- Advertisement -

ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶದಲ್ಲಿ ಮಾತನಾಡಿ, “ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ. ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ” ಎಂದು ಸಿದ್ದರಾಮಯ್ಯ ಘೋಷಿಸಿದರು.

“ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ತಿಳಿಸುವೆ. ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ , ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ” ಎಂದರು.

WhatsApp Image 2024 12 05 at 4.15.37 PM

“ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ” ಎಂದು ವಿವರಿಸಿದರು.

“ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂತಹ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೀದಿ ಬಡಿದಾಟದ ಬಗ್ಗೆ ಆರ್‌ಎಸ್‌ಎಸ್‌ ಏಕೆ ಮಾತನಾಡುತ್ತಿಲ್ಲ?

“ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ” ಎಂದು ಪ್ರಶ್ನಿಸಿದರು. ಆಗ ಸಭಿಕರು ಚಪ್ಪಾಳೆಯ ಸುರಿಮಳೆಗೈದರು.

“ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ. ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ” ಎಂದು ಕೇಳಿದರು.

ಹಾಸನ ಮತ್ತೆ ಕಾಂಗ್ರೆಸ್ ತೆಕ್ಕೆಗೆ

“ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿಗಳಿಸಲಿದೆ. ಇದು ಶತಸಿದ್ದ” ಎಂದು ಭರವಸೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...