ಶ್ರೀಕಾಂತ್‌ ಪೂಜಾರಿ ವಿಚಾರದಲ್ಲಿ ಹಸಿ ಸುಳ್ಳು ಹೇಳಿದ ಸಿಎಂ ಸಿದ್ದರಾಮಯ್ಯ: ವಿಪಕ್ಷ ನಾಯಕ ಅಶೋಕ್ ಆರೋಪ

Date:

Advertisements

“ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದ ಅವರು, “ಮುಖ್ಯಮಂತ್ರಿಯವರಿಗೆ ಒಂದೋ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈ ತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಇವೆರಡರಲ್ಲಿ ಯಾವುದು ಸತ್ಯವಾದರೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

Advertisements

“ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯ ಕಂಡಿದ್ದು, ಬಾಕಿ ಇರುವ ಒಂದು ಪ್ರಕರಣ ಸಹ 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಆದರೆ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ಅವರನ್ನು ಆ ಪ್ರಭು ಶ್ರೀರಾಮ ಕ್ಷಮಿಸುವುದಿಲ್ಲ” ಎಂದು ತಿಳಿಸಿದರು.

“ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಕರಾಳೆ ಛಾಯೆಯನ್ನು ಮೂಡಿಸುತ್ತಿದೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಕರಸೇವಕರನ್ನು ಹುಡುಕಿ ಹಳೆಯ ಪ್ರಕರಣಗಳಲ್ಲಿ ಬಂಧಿಸಲಾಗುತ್ತಿದೆ. ಹುಬ್ಬಳ್ಳಿಯಂತೆಯೇ ಚಿಕ್ಕಮಗಳೂರು, ಕಲಬುರ್ಗಿ ಮೊದಲಾದ ಕಡೆಗಳಲ್ಲಿ ಹೀಗೆಯೇ ಆಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಸರ್ಕಾರ ಹೇರಿದೆ” ಎಂದು ದೂರಿದರು.

“ರಾಮಭಕ್ತರ ಉತ್ಸಾಹ, ಮೆರವಣಿಗೆ, ಮಂತ್ರಾಕ್ಷತೆ ವಿತರಣೆ ಮೊದಲಾದವು ಕಾಂಗ್ರೆಸ್‌ ನಾಯಕರ ತಲೆ ಕೆಡುವಂತೆ ಮಾಡಿದೆ. ಕರಸೇವಕರನ್ನು ಬಂಧಿಸುವ ನೀಚತನವನ್ನು ಸರ್ಕಾರ ತೋರಿದೆ. ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌.ಯಡಿಯೂರಪ್ಪ, ಪಿ.ಸಿ.ಮೋಹನ್‌, ರವಿಕುಮಾರ್‌ ಸೇರಿದಂತೆ ನಾವೆಲ್ಲರೂ ಕರಸೇವಕರಾಗಿದ್ದು, ತಾಕತ್ತಿದ್ದರೆ ಸರ್ಕಾರ ನಮ್ಮನ್ನೂ ಕೂಡ ಬಂಧಿಸಲಿ. ರಾಜ್ಯದಲ್ಲಿ ಎಲ್ಲ ಜೈಲುಗಳನ್ನು ತೆರೆದು ನಮ್ಮೆಲ್ಲರನ್ನೂ ಕಳುಹಿಸಲಿ. ರಾಮಭಕ್ತರನ್ನು ತಡೆಯುವ ಶಕ್ತಿ ಇದೆಯೇ ಎಂಬುದನ್ನು ಸರ್ಕಾರ ತೋರಿಸಲಿ” ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಸವಾಲೆಸೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X