ವಿಬಿ-ಜಿ ರಾಮ್ ಜಿ ಕಾಯ್ದೆ: ಮನರೇಗಾ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Date:

ಮನರೇಗಾವನ್ನು ರದ್ದುಗೊಳಿಸಿ ಸದ್ಯ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ವಿಬಿ-ಜಿ ರಾಮ್ ಜಿ ಕಾಯ್ದೆಯಲ್ಲಿ ಇರುವ ಸಾಂವಿಧಾನಿಕ, ಹಣಕಾಸು ಮತ್ತು ಆಡಳಿತಾತ್ಮಕವಾದ ಗಂಭೀರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

- Advertisement -

“ಮನರೇಗಾ ರದ್ದತಿಯು ದುಡಿಯುವವರ ಹಕ್ಕನ್ನು ದುರ್ಬಲಗೊಳಿಸುತ್ತದೆ. ರಾಜ್ಯಗಳ ಮೇಲೆ ಅನ್ಯಾಯದ ಹೊರೆಯನ್ನು ಹೇರುತ್ತದೆ. ಆದ್ದರಿಂದ ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನವನ್ನು ಸ್ಥಗಿತಗೊಳಿಸಿ, ರಾಜ್ಯ ಸರ್ಕಾರಗಳೊಂದಿಗೆ ಸಾಂವಿಧಾನಿಕವಾಗಿ ಕಡ್ಡಾಯವಾಗಿ ನಡೆಯಬೇಕಾದ ಸಮಾಲೋಚನೆಗಳನ್ನು ಪ್ರಾರಂಭಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬಾಗಲಕೋಟೆ | ವಿಬಿ ಜಿ ರಾಮ್‌ ಜಿ ಅಂಗೀಕಾರ: ಕೇಂದ್ರದ ವಿರುದ್ಧ ಡಿ.22ರಂದು ಬೃಹತ್ ಪ್ರತಿಭಟನೆ

“ವಿಬಿ-ಜಿ ರಾಮ್‌ಜಿ ಕಾಯ್ದೆಯು ಬೇಡಿಕೆ ಆಧಾರಿತ, ಹಕ್ಕು ಆಧಾರಿತ ಮೂಲ ಉದ್ಯೋಗ ಖಾತರಿಯ ಉದ್ದೇಶವನ್ನೇ ಸೋಲಿಸುವ ಅಪಾಯವನ್ನುಂಟುಮಾಡುತ್ತದೆ. ಹೊಸ ವಿಬಿ-ಜಿ ರಾಮ್‌ಜಿ ಕಾಯ್ದೆ ಕೆಲಸದ ದಿನಗಳನ್ನು 100 ರಿಂದ 125 ದಿನಕ್ಕೆ ಹೆಚ್ಚಿಸಿದೆ. ಆದರೆ ಇದು ಕೇಂದ್ರ ಬದಲು ರಾಜ್ಯದ ಮೇಲೆ ಹೊರೆ ಹಾಕಲಾಗುತ್ತದೆ. ಕೇಂದ್ರ ಸರ್ಕಾರ ಬರೀ ಶೇಕಡ 60ರಷ್ಟು ಕೊಡುಗೆ ನೀಡುತ್ತದೆ. 125 ದಿನಗಳ ಕೆಲಸದ ಕಾನೂನು ಖಾತರಿ ಎಂಬುದು ಉದ್ಯೋಗ ಖಾತರಿಯ ತತ್ವವನ್ನೇ ಹಾಳು ಮಾಡುತ್ತದೆ. ಬೇಡಿಕೆಯಿದ್ದರೂ ಅನೇಕ ಗ್ರಾಮ ಪಂಚಾಯತ್‌ಗಳು ಹಣವಿಲ್ಲದೆ ಉಳಿಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

“ಇದು ಮನರೇಗಾ ಮನೋಭಾವಕ್ಕೆ ವಿರುದ್ಧವಾಗಿದೆ ಮತ್ತು 73 ನೇ ತಿದ್ದುಪಡಿಯ ಅಡಿಯಲ್ಲಿ ವಿಕೇಂದ್ರೀಕರಣದ ಸಾಂವಿಧಾನಿಕ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಹಣಕಾಸಿನ ಮಾದರಿಯಲ್ಲಿನ ಬದಲಾವಣೆಯೂ ಅಷ್ಟೇ ಕಳವಳಕಾರಿಯಾಗಿದೆ. ಅಸ್ತಿತ್ವದಲ್ಲಿರುವ ಮನರೇಗಾದಲ್ಲಿ ರಾಜ್ಯಗಳು 90:10 ಕೇಂದ್ರ-ರಾಜ್ಯ ಹಂಚಿಕೆ ವ್ಯವಸ್ಥೆಯನ್ನು ಅನುಸರಿಸುತ್ತವೆ. ಹೊಸ ಕಾಯಿದೆಯು ಹೆಚ್ಚಿನ ರಾಜ್ಯಗಳಿಗೆ ಈ ಹಂಚಿಕೆಯನ್ನು 60:40ರಂತೆ ಮಾಡುತ್ತದೆ. ಇದು ರಾಜ್ಯಗಳಿಗೆ ಹಣಕಾಸಿನ ಹೊರೆಯನ್ನು ಹೇರುತ್ತದೆ. ಈಗಾಗಲೇ ರಾಜ್ಯಗಳು ಹಣಕಾಸು ವಿಕೇಂದ್ರೀಕರಣದಿಂದಾಗಿ ಒತ್ತಡದಲ್ಲಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಹೊಸ ಕಾಯಿದೆಯು ಹಂಚಿಕೆಯನ್ನು ಮೀರಿದ ಯಾವುದೇ ವೆಚ್ಚವನ್ನು ಕೇಂದ್ರವು ಸೂಚಿಸಿದ ಕಾರ್ಯವಿಧಾನಗಳ ಪ್ರಕಾರ ರಾಜ್ಯ ಸರ್ಕಾರವು ಭರಿಸುತ್ತದೆ ಎಂದು ಹೇಳುತ್ತದೆ. ಇದು ಕೇಂದ್ರೀಯವಾಗಿ ನಿಗದಿಪಡಿಸಿದ ಮಿತಿಯನ್ನು ಮೀರಿದ ಬೇಡಿಕೆಗೆ ರಾಜ್ಯಗಳು ಶೇಕಡ 100ರಷ್ಟು ಹೊಣೆಗಾರಿಕೆ ಎದುರಿಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

“ಉದ್ಯೋಗ ಖಾತರಿ ಕಾನೂನು ಕೇವಲ ಕಲ್ಯಾಣ ಯೋಜನೆಯಲ್ಲ. ಇದು ಐತಿಹಾಸಿಕ, ಜಾಗತಿಕವಾಗಿ ಮೆಚ್ಚುಗೆ ಪಡೆದ ಹಕ್ಕು ಆಧಾರಿತ ಶಾಸನವಾಗಿದ್ದು, ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಸಾಕಾರ ರೂಪವಾದ ಮಹಾತ್ಮ ಗಾಂಧಿಯವರ ಹೆಸರನ್ನು ಹೊಂದಿರುವ ಯೋಜನೆ. ಈ ಕಾನೂನಿನಿಂದ ಅವರ ಹೆಸರನ್ನು ಅಳಿಸುವುದು ದುರದೃಷ್ಟಕರ. ಕಾನೂನಿನ ನೈತಿಕ ಅಧಿಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

“ಆದ್ದರಿಂದ ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ಸ್ಥಗಿತಗೊಳಿಸಿ, ರಾಜ್ಯ ಸರ್ಕಾರಗಳೊಂದಿಗೆ ಸಾಂವಿಧಾನಿಕವಾಗಿ ಕಡ್ಡಾಯವಾಗಿ ನಡೆಯಬೇಕಾದ ಸಮಾಲೋಚನೆಗಳನ್ನು ಪ್ರಾರಂಭಿಸಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....