ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ; ವಿದ್ಯಾರ್ಥಿಗಳಿಗೆ ಫುಲ್‌ ಖುಷಿ

Date:

Advertisements

ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

250 ವಿದ್ಯಾರ್ಥಿಗಿರುವ ಮೊರಾರ್ಜಿ ಶಾಲೆಗೆ ತೆರಳಿದ ಮುಖ್ಯಮಂತ್ರಿಗಳು, ಮೊದಲಿಗೆ 10 ನೇ ತರಗತಿಗೆ ಭೇಟಿ ನೀಡಿದರು. ಪಠ್ಯ, ಬಾತ್ ರೂಂ ಕಿಟ್ ಸಮರ್ಪಕ ವಿತರಣೆ ಆಗಿದೆಯಾ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದರು. ಸರಿಯಾಗಿ ಆಗ್ತಿದೆ ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದು ವಿದ್ಯಾರ್ಥಿಗಳು ಉತ್ತರಿಸಿದರು. ಆಗಾಗ ಪಲಾವ್ ಕೊಡ್ತಾರೆ ಎಂದು ವಿದ್ಯಾರ್ಥಿಗಳು ಖುಷಿಪಟ್ಟರು. ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಸಿಎಂಗೆ ತಿಳಿಸಿದರು.

Advertisements

ಕಳೆದ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರು ವಿವರಣೆ ನೀಡಿದರು. ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ, ಶಾಸಕ ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.‌

ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ

ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ, ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನಿಸಿದಾಗ ‘ನೀವೇ ಆರಂಭಿಸಿದ್ದು’ ಎಂದು ವಿದ್ಯಾರ್ಥಿ ಹೇಳಿದರು. ಮಕ್ಕಳು ಚಪ್ಪಾಳೆ ತಟ್ಟಿದರು.

“ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.

“ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X