ರಾಜ್ಯಕ್ಕೆ ಕಾಲಿಡುವ ಮೊದಲು ಇವುಗಳಿಗೆ ಉತ್ತರಿಸಿರುವಿರಾ? ಗೃಹ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಇದನ್ನೇ ಅಸ್ತವನ್ನಾಗಿಸಿರುವ ರಾಜ್ಯ ಸರ್ಕಾರ, ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ ಎಂಬ ಅಭಿಯಾನವನ್ನು ಆರಂಭಿಸಿದೆ.

ಕರ್ನಾಟಕಕ್ಕೆ ಕಾಲಿಡುವ ಮೊದಲು ನಾವು ಕೇಳುವ ಈ ಸಾಲು ಸಾಲು ಪ್ರಶ್ನೆಗೆ ಉತ್ತರಿಸಿರುವಿರಾ ಎಂದು  ಕೂಡ ವಾಗ್ದಾಳಿ ಮಾಡಿದ್ದಾರೆ.

ಅಮಿತ ಪ್ರಶ್ನೆಗಳು ಎಂದು ಸರಣಿ ಟ್ವೀಟ್ ಮಾಡಿರುವ ಅವರು, “ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹ ಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂಥದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ?” ಎಂದು ಕೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಾ ಅವರೇ?” ಎಂದು ಕೇಳಿದ್ದಾರೆ.

“ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘ಭಾರತ್ ಬ್ರಾಂಡ್’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಾ ಅವರೇ?” ಎಂದು ಸಿಎಂ ಪ್ರಶ್ನಿಸಿದ್ದಾರೆ.

“ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ. ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ?” ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

“ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಾ ಅವರೇ?” ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...