ಹುಂಡಿ ಹಣ ದುರ್ಬಳಕೆ ಆರೋಪ: ಚುನಾವಣೆಗಾಗಿ ಬಿಜೆಪಿಯಿಂದ ಕೋಮು ಧ್ರುವೀಕರಣ; ಸಿದ್ದರಾಮಯ್ಯ

Date:

Advertisements

ಹಿಂದೂಯೇತರ ಸಮುದಾಯಗಳಿಗೆ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿಯವರ ಆರೋಪದ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು, ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Advertisements

ಪ್ರಸ್ತುತ ತಿದ್ದುಪಡಿಗೂ ಮುನ್ನ ನಿಧಿಗೆ ಯಾವೆಲ್ಲ ಹಣವು ಬರುತ್ತಿತ್ತು ಎಂಬುದನ್ನು ವಿವರಿಸಿರುವ ಸಿಎಂ, ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

“ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ” ಎಂದು ಸಿಎಂ ಜನತೆಗೆ ಕರೆ ಕೊಟ್ಟಿದ್ದಾರೆ.

“ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ. ಇದೆಲ್ಲವನ್ನೂ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದು ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನು ಓದಿದ್ದೀರಾ? ಬಜೆಟ್ ಅಧಿವೇಶನ | ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ ನಿರ್ಣಯ ಮಂಡಿಸಿದ ಸರ್ಕಾರ; ಬಿಜೆಪಿ ಧರಣಿ

“ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಕಾರಣಕ್ಕಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ. ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಡಾಲರ್‌ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ಅವರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೂ ಹರಿಹಾಯ್ದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X