ರಾಜ್ಯಕ್ಕೆ ಅನ್ಯಾಯವಾಗದಂತೆ ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಒತ್ತಾಯ

Date:

Advertisements

“ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಕ್ಸ್ (ಟ್ವಿಟರ್)ನಲ್ಲಿ ಇಂದು ನಡೆದ “ನಮ್ಮ ತೆರಿಗೆ,ನಮ್ಮ ಹಕ್ಕು” ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

“ಸಂವಿಧಾನ ಬದ್ಧವಾದ ಒಕ್ಕೂಟ ವ್ಯವಸ್ಥೆಯನ್ನು ಇಡಿ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ ಐದು ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿ ಇದರ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ” ಎಂದು ತಿಳಿಸಿದರು.

Advertisements

“15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ 4.71% ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ 1.07% ನಮಗೆ ಕಡಿತ ಆಗಿ ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದ್ದು ರಾಜ್ಯಕ್ಕೆ 1,87000 ಕೋಟಿ ನಷ್ಟ ಆಗಿದೆ. ಅಂದರೆ ನಾವು ಕೊಡುವ ತೆರಿಗೆಯ 100 ರೂ.ನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ” ಎಂದು ಸಿಎಂ ವಿವರಿಸಿದರು.

“ಬೆಂಗಳೂರು ಫೆರಿಫೆರಲ್ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6000 ಕೋಟಿ ಸೇರಿ ಒಟ್ಟು 11495 ಕೋಟಿ ವಿಶೇಷ ಅನುದಾನ ಕೊಡಲು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ರಾಜ್ಯದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು” ಎಂದು ತಿಳಿಸಿದರು.

“ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗಿದ್ದ ತೆರಿಗೆಯಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ ಇದರಲ್ಲೂ ನಾವು ರಾಜ್ಯಗಳು ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.

“ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗೋದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ” ಎಂದು ತಿಳಿಸಿದರು.

“ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ಮಾತ್ರ ಕೊಡ್ತಾರೆ. ಇದನ್ನು ಸಹಿಸಬೇಕಾ? ಆದರೆ ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ” ಎಂದು ತಿಳಿಸಿದರು.

“ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು 30% ನಿಂದ 22.5%ಕ್ಕೆ ಇಳಿಸಿದರು. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದರು. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚೆಚ್ಚು ಮಾಡುತ್ತಲೇ ಹೋಗುತ್ತಿದ್ದಾರೆ” ಎಂದು ತಿಳಿಸಿದರು.

“ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದುಕೊಂಡು, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ” ಎಂದು ಸಿಎಂ ತಿಳಿಸಿದರು.

“ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ GST ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ GST ಹೆಚ್ಚಿಸಲೇಬೇಕು. ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಸಿದ್ದರಾಮಯ್ಯ ಹೇಳಿದರು.

“ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 50% ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ ಎಂದು ಕೇಳಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಇದೇ ನರೇಂದ್ರ ಮೋದಿ ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತನಾಡುತ್ತಿದ್ದಾರೆ” ಎಂದು ಸಿಎಂ ನೆನಪಿಸಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಲ್ಹಾದ್  ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತನಾಡಿದ್ದಾರೆ” ಎಂದು ದೂರಿದರು.

ಇದನ್ನು ಓದಿದ್ದೀರಾ? ಬಜೆಟ್‌ ಅಧಿವೇಶನ | ಕಾಂಗ್ರೆಸ್ ಸರ್ಕಾರದಲ್ಲಿ ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯುತ್ತಿದೆ: ಆರ್‌ ಅಶೋಕ್‌

“ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X