ಅನಂತ ಕುಮಾರ್‌ರವರ ಸಂವಿಧಾನ ಬದಲಾವಣೆ ಹೇಳಿಕೆ ಮನುಸ್ಮೃತಿ ಜಾರಿಯ ಆಲೋಚನೆ: ಸಿಎಂ ಸಿದ್ದರಾಮಯ್ಯ

Date:

“ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಸಿಎಂ, “ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂ ಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ” ಎಂದು ಸಿಎಂ ತಿಳಿಸಿದ್ದಾರೆ.”

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತು ಹಾಕಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರಿಂದ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ತೀವ್ರ: ಟಿಕೆಟ್ ನೀಡಿದರೆ ಬಹಿಷ್ಕಾರದ ಎಚ್ಚರಿಕೆ

“ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...