ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯ: ವಿಪಕ್ಷ ನಾಯಕ ಅಶೋಕ್ ಆರೋಪ

Date:

ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣವು ದಿನಕ್ಕೊಂದು ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯೊದಗಿಸಿದೆ.

- Advertisement -

ಈ ನಡುವೆ ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, “ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೊಬೈಲ್‌ ಟ್ರ್ಯಾಕ್ ಮಾಡಿದರೆ ಪ್ರಜ್ವಲ್ ರೇವಣ್ಣ ಪರಾರಿಯಾಗಲು ಯಾರು ಸಹಕರಿಸಿದರು ಎಂಬುದು ಗೊತ್ತಾಗುತ್ತದೆ. ಪ್ರಜ್ವಲ್ ರೇವಣ್ಣನನ್ನು ದೇಶದಿಂದ ಪರಾರಿಯಾಗಲು ಬಿಟ್ಟವರು ಸಿದ್ದರಾಮಯ್ಯನವರು, ಆದರೆ ಪ್ರಶ್ನೆ ಮೋದಿಯವರ ಬಳಿ ಕೇಳಲಾಗುತ್ತಿದೆ. ಕರ್ನಾಟಕದಲ್ಲಿ ಪೊಲೀಸ್‌ನವರು ಇದ್ದಾರ ಅಥವಾ ಸತ್ತಿದ್ದಾರಾ? ಇಂಟೆಲಿಜೆನ್ಸ್‌ನವರು ಏನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಪ್ರಕರಣದಲ್ಲಿ ರಾಜ್ಯ ಸರ್ಕಾರದ ತಪ್ಪು ಕೇಂದ್ರದ ಮೇಲೆ ಹೊರಿಸುತ್ತಿರುವುದೇಕೆ? ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ ಅಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಬರೆದುಕೊಡಲಿ. ದೇವೇಗೌಡರಿಗೆ ಅಪಮಾನ ಮಾಡಬೇಕೆಂದು ಮಾಡಿದ ಯೋಜನೆ ಇದು” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

“ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ರಾಜ್ಯ ಸರ್ಕಾರ ಹಿಂದೇಟು ಏಕೆ ಹಾಕುತ್ತಿದೆ. ತಪ್ಪು ಮಾಡಿದರೆ ಬಂಧಿಸಬೇಕು. ಇಡೀ ಪ್ರಕರಣ ನೋಡಿದರೆ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಸಿದ್ದರಾಮಯ್ಯನವರೇ ಕಳಿಸಿದ್ದಾರೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ಆರೋಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....