ಗ್ಯಾರಂಟಿಗಳ ಫಲಾನುಭವಿಗಳಾಗಿದ್ದರೂ ಬಿಜೆಪಿ, ಜೆಡಿಎಸ್‌ನವರು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

Advertisements

ಬಿಜೆಪಿ ಹಾಗೂ ಜೆಡಿಎಸ್‌ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬುಧವಾರ ಸಂಜೆ ಬೆಂಗಳೂರಿನ ಏಟ್ರಿಯಾ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ ಹೆಮ್ಮೆಯಿಂದ ಮಾತನಾಡಿ” ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Advertisements

“ಶಾಸಕರು ಸದನದಲ್ಲಿ ಪರಿಣಾಮಕಾರಿಯಾಗಿ, ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸದನದ ಸಮಯವನ್ನು ಅರ್ಥಪೂರ್ಣಗೊಳಿಸಬೇಕು. ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಏಕೆಂದರೆ ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿಯ ವಿಚಾರಗಳೇ ಇಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.

“ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ. ಈ ಸತ್ಯ ನಾಡಿನ‌ ಜನತೆಗೆ ಮನವರಿಕೆಯಾಗಿದೆ. ಆದರೆ ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ‌. ಇದಕ್ಕೆ ಸತ್ಯದ ಮೂಲಕ, ಅಧಿಕೃತ ಅಂಕಿ-ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಿ” ಎಂದು ಶಾಸಕರಿಗೆ ಸಿಎಂ ಕರೆ ನೀಡಿದರು.

“ಬಿಜೆಪಿ – ಜೆಡಿಎಸ್ ಗ್ಯಾರಂಟಿ ಯೋಜನೆಗಳ 5 ಕೋಟಿ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ನಾವು ಈ ಜನರ ಪರವಾಗಿ ನಿಂತಿದ್ದೇವೆ. ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು” ಎಂದು ಸಿಎಂ ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯಸಭೆಗೆ ರಾಜ್ಯದಿಂದ ಅಭ್ಯರ್ಥಿಗಳಾಗಿರುವ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಅಜಯ್ ಮಾಕನ್ ಅವರಿಗೆ ಅಭಿನಂದಿಸಲಾಯಿತು.

ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಹಿರಿಯ ಸಚಿವರಾದ ಎಚ್ ಕೆ ಪಾಟೀಲ್, ಡಾ. ಜಿ ಪರಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X