ಕರ್ನಾಟಕ ಸುವರ್ಣ ಸಂಭ್ರಮದ ಸಮಾರೋಪವನ್ನು ‘ಕನ್ನಡ ಜನೋತ್ಸವ’ವಾಗಿ ಆಚರಿಸಲು ಸಿಎಂ ನಿರ್ಧಾರ

Date:

Advertisements

2024ರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ‘ಕನ್ನಡ ಜನೋತ್ಸವ’ವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಕೈಗೊಂಡರು.

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್‌ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.

Advertisements

ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ. ಕರ್ನಾಟಕ ಸುವರ್ಣ ಸಂಭ್ರಮ -50 ಸಮಾರೋಪ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡುವ ತೀರ್ಮಾನ ಮಾಡಲಾಯಿತು.

“ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪ್ರಗತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಬಳ್ಳಾರಿಯಲ್ಲಿ ರಂಜಾನ್‌ ಸಾಬ್‌ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ. ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ. ಇವೆಲ್ಲವೂ ಪೂರ್ಣಗೊಳ್ಳಬೇಕು” ಎಂದು ಸಿಎಂ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಮಸಲತ್ತು-ಕೇಜ್ರೀವಾಲ್ ಸವಾಲು

“50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲಾಗುವುದು. ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1ರಂದು ಅನಾವರಣ ಮಾಡಬೇಕು” ಎಂದು ಸಿಎಂ ನಿರ್ದೇಶಿಸಿದರು.

ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್‌ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್‌ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡುವ ಬಗ್ಗೆ ಚರ್ಚೆ ನಡೆಯಿತು .

“ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಬೇಕು. ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್‌ ವೇಳೆಗೆ ಬಿಡುಗಡೆ ಮಾಡಲಾಗುವುದು” ಎಂದು ಸಿಎಂ ತಿಳಿಸಿದರು.

“ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ. ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು” ಎಂದು ಸಭೆಯಲ್ಲ ಹೇಳಿದರು.

“ಎಲ್ಲ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು. ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ” ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಎಸ್.ಆರ್.ಉಮಾಶಂಕರ್‌, ಇಲಾಖಾ ಕಾರ್ಯದರ್ಶಿ ಅಜಯ ನಾಗಭೂಷಣ್, ವಿವಿಧ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X