ನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ದ್ವಿಮುಖ ನೀತಿ: ಬಸವರಾಜ ಬೊಮ್ಮಾಯಿ ಟೀಕೆ

Date:

ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಯಾವುದೇ ಮಾತನಾಡುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

- Advertisement -

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಲ್ಪ ಸಂಖ್ಯಾತ ಮಹಿಳೆ. ಅವಳಿಗೂ ರಕ್ಷಣೆ ನೀಡದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ ಪೊಲೀಸರು ಅದನ್ನು ತಳ್ಳಿ ಹಾಕುವ ಪ್ರಯತ್ನ ‌ನಡೆಸಿದರು. ಆರೋಪಿಗಳಿಗೆ ಜಾಮೀನು ಸಿಗುವಂತ ಪ್ರಕರಣ ದಾಖಲಿಸಿದರು. ಯುವತಿ ದೈರ್ಯವಾಗಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ. ಇದರಿಂದ ಪ್ರಕರಣ ಗಂಭೀರವಾಗಿದೆ. ಮತ್ತೊಂದು ಬಾರಿ ಯುವತಿಯ ಮೆಡಿಕೆಲ್ ಟೆಸ್ಟ್ ಆಗಬೇಕು” ಎಂದು ಒತ್ತಾಯಿಸಿದರು.

“ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ಚಾಂಪಿಯನ್. ಇಲ್ಲಿ ಅಲ್ಪಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿದೆ. ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಒಂಬತ್ತು ತಿಂಗಳಲ್ಲಿ ಶೇ. 30 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಳವಾಗಿವೆ. ಈ ಗ್ಯಾಂಗ್ ಈ ಹಿಂದೆಯೂ ಇದೇ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದೆ. ಅದನ್ನು ಮುಚ್ಚಿ ಹಾಕಲಾಗಿದೆ. ಅದನ್ನೂ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಈ ಪ್ರಕರಣಗಳ ಕುರಿತು ತನಿಖೆ ನಡೆಸಲು ಪ್ರತ್ಯೇಕ ತಂಡ ರಚನೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬದುಕಿನಲ್ಲಿ ಬದಲಾವಣೆ ತರಲು ಯುವನಿಧಿ ಜಾರಿಗೆ ತಂದಿದ್ದೇವೆ: ಡಿಸಿಎಂ ಡಿ ಕೆ ಶಿವಕುಮಾರ್

ಕಾನೂನು ಬಾಹಿರ ಹುದ್ದೆ

“ರಾಜ್ಯದಲ್ಲಿ ದೊಡ್ಡ ಮಟ್ಟದ ಬರ ಬಿದ್ದಿದೆ. ಸಿಎಂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಿಎಂ ಆರ್ಥಿಕ ಪರಿಸ್ಥಿತಿ ಸರಿಯಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ಬರ ಪರಿಹಾರ, ಶಾಲಾ ಕಟ್ಟಡ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಗಳಿಗೆ ಅನುದಾನ ಬಿಡುಗಡೆ ಮಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗಕ್ಕೆ 3000 ಕೊಟಿ ರೂ.ಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಅದನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕೆ ಬಂದ ಮೆಲೆ ಕಾರ್ಯಕರ್ತರನ್ನು ಮರೆತಿದ್ದರು. ಅವರು ಆಕ್ರೊಶಗೊಂಡಿದ್ದರಿಂದ ಅವರನ್ನು ಸಮಾಧಾನಪಡಿಸಲು ಕಾನೂನು ಬಾಹಿರವಾಗಿ ಸಂವಿಧಾನ ಬಾಹಿರವಾಗಿ ಈ ಹುದ್ದೆ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

“ಗ್ಯಾರಂಟಿ ಉಸ್ತುವಾರಿಗೆ ಸಂಪುಟ ಶ್ರೇಣಿ ನೀಡುವುದು ಸಂವಿಧಾನ ಬಾಹಿರ. ಇದನ್ನು ಸಂಪುಟದ ಸಚಿವರು ಗಂಭಿರವಾಗಿ ಯೋಚಿಸಬೇಕು. ಸಂಪುಟದ ಮರ್ಯಾದೆ ಹಾಳಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...