ಅಶ್ವತ್ಥನಾರಾಯಣರನ್ನು ನೇಣುಗಂಬಕ್ಕೆ ಏರಿಸಬೇಕು: ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

Date:

  • ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ
  • ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ

ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಶೈಕ್ಷಣಿಕ ವ್ಯವಸ್ಥೆಯನ್ನು ಅಶ್ವತ್ಥನಾರಾಯಣ ಸಂಫೂರ್ಣ ಹಾಳು ಮಾಡಿದ್ದಾರೆ. ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ. ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಸರ್ಕಾರಿ ವಿವಿಗಳ ವಿದ್ಯಾರ್ಥಿಗಳ ಗುಣಮಟ್ಟದ ಬಗ್ಗೆ ಅನುಮಾನಪಡುವಂತೆ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ವಿವಿಗಳಲ್ಲಿ ಮೂಲ ಸೌಕರ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿಗಳ ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ. ಸರ್ಕಾರಿ ಸ್ವಾಮ್ಯದ ವಿವಿಗಳಲ್ಲಿ ತಕ್ಷಣ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಯ ಮಾಜಿ ಸಚಿವ ಅಶ್ವತ್ಥನಾರಾಯಣ ಮಂತ್ರಿಯಾಗಿದ್ದಾಗ ಏನೂ ಮಾಡಿಲ್ಲ. ಶಿಕ್ಷಣದ ಹೆಸರಿನಲ್ಲಿಯೂ ರಾಜಕೀಯ ಮಾಡಿದ್ದಾರೆ” ಎಂದು ಮೊಯ್ಲಿ ಕಿಡಿ ಕಾರಿದ್ದಾರೆ.

“ವಿಧಾನಮಂಡಲ ಅಧಿವೇಶನ ನಂತರ ನಿಗಮ ಮಂಡಳಿಗಳ ನೇಮಕ ಆಗಲಿದೆ. ಪಕ್ಷಕ್ಕೆ ದುಡಿದ ಕಾರ್ಯಕರ್ತರು ಹಾಗೂ ಮುಖಂಡರ ನೇಮಕ ಆಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಬೀರಲಿದೆ. ರಾಜ್ಯದಲ್ಲಿ ಈ ಬಾರಿ ಇಪ್ಪತ್ತೈದಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ” ಎಂದು ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಸ್ಪೀಕರ್​ ಒಪ್ಪಿದರೆ ಸದನದಲ್ಲೇ ಪೆನ್​ಡ್ರೈವ್ ಬಿಡುಗಡೆ: ಎಚ್​ ಡಿ ಕುಮಾರಸ್ವಾಮಿ

“ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳನ್ನು ಬೆದರಿಸಬಹುದು. ಆದರೆ, ಜನರನ್ನು ಬೆದರಿಸಲು ಸಾಧ್ಯವಿಲ್ಲ. ಜನರ ಆಕ್ರೋಶ ಬಿಜೆಪಿ ವಿರುದ್ದ ಜ್ವಾಲಾಮುಖಿಯಾಗಿ ಸಿಡಿಯಲಿದೆ. ದೇಶದ ಸಂಪನ್ಮೂಲಗಳು ಕೆಲವೇ ಶ್ರೀಮಂತರ ಬಳಿ ಸೇರಿವೆ. ಬಿಜೆಪಿ ಶ್ರೀಮಂತ ಪರ ಇರುವ ಪಕ್ಷ. ಕಾಂಗ್ರೆಸ್ ಬಡವರ ಪರ ಇರುವ ಪಕ್ಷ. ಬಿಜೆಪಿಗರು ದೇಶಭಕ್ತರಲ್ಲ ದೇಶ ದ್ರೋಹಿಗಳು. ಮೋದಿ ಯಾವಾಗ ಏನು ಮಹಾಕಾರ್ಯ ಮಾಡಿದ್ದಾರೆ ಹೇಳಿ? ಅವರು ದೇಶವನ್ನು ಮುನ್ನಡೆಸುವುದಲ್ಲ ಹಿಂದೆ ನೂಕುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಎಚ್ ​​ಡಿ ಕುಮಾರಸ್ವಾಮಿ ಪೆನ್ ಡ್ರೈವ್​​ನಲ್ಲಿ ಇರುವುದು ಬಾಂಬ್ ಅಲ್ಲ ಟುಸ್ ಪಟಾಕಿ. ಕುಮಾರಸ್ವಾಮಿ ಈ ರೀತಿ ಹಲವು ಬಾರಿ ನಡೆದುಕೊಂಡಿದ್ದಾರೆ. ಅವರು ಬಿಜೆಪಿ ಜೊತೆ ಸೇರಿ ಈ ರೀತಿ ವರ್ತಿಸುತ್ತಿದ್ದಾರೆ. ಚುನಾವಣೆಯ ಸೋಲಿನ ಹತಾಶೆಯಿಂದ ಜನರ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಗೆ ಗೈರು ಹಾಜರಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ : ಡಿಸಿ

ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ...

ಚಿತ್ರದುರ್ಗದಲ್ಲಿ ಬಿಎಸ್ ಪಿ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್...

ದಾವಣಗೆರೆ | ಒಳ ಮೀಸಲಾತಿ ಅನುಷ್ಠಾನ ಮಾಡದೆ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ : ಮಂಜುನಾಥ್ ಕುಂದುವಾಡ

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ...

ಮಧುಗಿರಿ | ಕಾರುಗಳ ನಡುವೆ ಅಪಘಾತ : ಐವರು ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ...