ನೀತಿ ಸಂಹಿತೆ ಎಫೆಕ್ಟ್ : ವಾರದೊಳಗೆ 47 ಕೋಟಿ ಜಪ್ತಿ ಮಾಡಿದ ಚುನಾವಣಾ ಆಯೋಗ

Date:

  • ವಿವಿಧ ಪ್ರಕರಣಗಳಲ್ಲಿ ಕೋಟಿ, ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ ಆಯೋಗ
  • ನಗ, ನಾಣ್ಯ, ಶಸ್ತ್ರಾಸ್ತ್ರಗಳ ಜೊತೆಗೆ 1,238 ಪ್ರಕರಣಗಳಿಂದ 1,869 ಮಂದಿ ಅಂದರ್

ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಒಂದು ವಾರ ಉರುಳುವುದರೊಳಗೆ ಕೋಟಿ ಕೋಟಿ ಮೊತ್ತದ ಚಿನ್ನಾಭರಣ, ಮದ್ಯ ಹಾಗೂ ನಗದನ್ನು ಚುನಾವಣಾ ಆಯೋಗ ಜಪ್ತಿ ಮಾಡಿದೆ.

ಆಯೋಗ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಮಾಹಿತಿಯಂತೆ ಇದುವರೆಗೆ ಒಟ್ಟು 47.43 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಇಲಾಖೆ ದಾಸ್ತಾನು ಸೇರಿವೆ.

ರಾತ್ರಿಗಸ್ತು ಹಾಗೂ ಪರಿಶೀಲನೆ ವೇಳೆ ಫ್ಲೈಯಿಂಗ್ ಸ್ಕ್ವಾಡ್, ಎಸ್ಎಸ್ಟಿ, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು 12.82 ಕೋಟಿ ರೂಪಾಯಿ ನಗದು, 16.02 ಕೋಟಿ ರೂಪಾಯಿ ಬೆಲೆಬಾಳುವ 2,78,798 ಲೀಟರ್ ಮದ್ಯ, 41,26,155 ರೂಪಾಯಿ ಮೌಲ್ಯದ 79.44 ಕೆಜಿ ಡ್ರಗ್ ವಶಕ್ಕೆ ತೆಗೆದುಕೊಂಡಿದೆ.

ಅಬಕಾರಿ ಇಲಾಖೆಯು 450 ಕೇಸ್‌ಗಳನ್ನು ದಾಖಲಿಸಿ, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 305 ಪ್ರಕರಣಗಳು, 16 ಎನ್ಡಿಪಿಎಸ್, ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 15(ಎ) ಅಡಿಯಲ್ಲಿ 1,238 ಕೇಸ್‌ ದಾಖಲಿಸಿ 270 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್ಎಸ್ಟಿ ಹಾಗೂ ಪೊಲೀಸರ್ ಕಾರ್ಯಾಚರಣೆಯಲ್ಲಿ 6.72 ಕೋಟಿ ಮೌಲ್ಯದ 13.575 ಕೆಜಿ ಚಿನ್ನ, 63 ಸಾವಿರ ಮೌಲ್ಯದ 88.763 ಕೆಜಿ ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? :ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ…

ಇದಲ್ಲದೆ 10.79 ಕೋಟಿ ಮೌಲ್ಯದ ಉಚಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಉಳಿದಂತೆ 31,486 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದ್ದು, 7 ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಹಾಗೆಯೆ ವಿವಿಧ ಪ್ರಕರಣಗಳಲ್ಲಿ 1,869 ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್...

ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌ | ವಿಚಾರಣೆಗೆ ಹಾಜರಾಗುವುದಿಲ್ಲ ಎಂದ ಟಿಎಂಸಿ ನಾಯಕ

ಪ್ರಾಥಮಿಕ ಶಾಲಾ ನೇಮಕಾತಿ ಹಗರಣದಲ್ಲಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿದ್ದ ಸಿಬಿಐ ಪಂಚಾಯತ್‌ ಚುನಾವಣೆಯ...