ದೇವರಾಜ ಅರಸು ಪುಣ್ಯಸ್ಮರಣೆ | ಸಾಮಾಜಿಕ ನ್ಯಾಯ ಪಾಲಿಸುತ್ತಿರುವ ಕಾಂಗ್ರೆಸ್:‌ ಸಿದ್ದರಾಮಯ್ಯ

Date:

Advertisements

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಗುರುವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ದೇವರಾಜ ಅರಸು ಅವರು ಒಬ್ಬ ಜಾತ್ಯತೀತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದರು” ಎಂದರು.

“ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಏಕೀಕರಣದ ನಂತರ 1973 ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ವರ್ಷ ಅದರ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದು ಹೇಳಿದರು.

Advertisements
Bose Military School

“ದೇವರಾಜ ಅರಸು ಅವರು ಬಡವರ, ಶೋಷಿತರ , ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕರು. ಅದಕ್ಕೇ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು ಉಳುವವನೇ ಒಡೆಯ ಎಂದು ಘೋಷಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ” ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ

“ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ. ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುದ್ಧವಾಗಿದ್ದಾರೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಚುನಾವಣೆ | ಎಎಪಿ ಏಕಾಂಗಿ ಸ್ಪರ್ಧೆ: ಕಾಂಗ್ರೆಸ್ ಜೊತೆ ಮೈತ್ರಿ ನಿರಾಕರಿಸಿದ ಕೇಜ್ರಿವಾಲ್

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ...

ಚೀನಾದಿಂದ ರಸಗೊಬ್ಬರ ಪೂರೈಕೆ ಸ್ಥಗಿತ, ಮೇಕ್ ಇನ್ ಇಂಡಿಯಾ- ಆತ್ಮನಿರ್ಭರ ಭಾರತ ವಿಫಲ: ಮಲ್ಲಿಕಾರ್ಜುನ ಖರ್ಗೆ

ಬೇರೆ ರಾಷ್ಟ್ರಗಳಿಗೆ ಯಾವುದೇ ನಿರ್ಬಂಧ ಹೇರದಿದ್ದರೂ ಕಳೆದೆರಡು ತಿಂಗಳಿನಿಂದ ಭಾರತಕ್ಕೆ ಚೀನಾ...

ಕೆ ಆರ್ ಪೇಟೆ | ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿಗಿಳಿದ ಕರ್ನಾಟಕ ಪಬ್ಲಿಕ್‌ ಶಾಲೆ; ಉಲ್ಲಂಘನೆಯಾಯಿತೇ ಶಿಕ್ಷಣದ ಹಕ್ಕು?

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅನಗತ್ಯ ದಾಖಲಾತಿಗಳನ್ನು ಮಾಡಿಕೊಂಡಿದ್ದು, ಪೋಷಕರಿಂದ ವಂತಿಗೆಯ ಹೆಸರಿನಲ್ಲಿ...

ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ...

Download Eedina App Android / iOS

X