ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

Date:

Advertisements

ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ಕರೆದು ಮಾತನಾಡಿ, “ರಾಜ್ಯದಲ್ಲಿ ಕೋಮುಗಲಭೆಗಳು ನಡೆದಿಲ್ಲ, ಇದು ಉತ್ತಮ ಕಾನೂನು ಸುವ್ಯವಸ್ಥೆಗೆ ಸಾಕ್ಷಿ. ಆದರೆ ಸೈಬರ್ ಕ್ರೈಂ ಹೆಚ್ಚಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿ ಸೈಬರ್ ಅಪರಾಧಗಳ ನಿಗ್ರಹಿಸಿ, ಅಪರಾಧ ಪತ್ತೆ ಹಚ್ಚಬೇಕು ಎಂದು ಹೇಳಿರುವೆ” ಎಂದರು.

“ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆಯಿದ್ದು, ಹೆಚ್ಚು ಜವಾಬ್ದಾರಿಗಳನ್ನು ವಹಿಸಲು ಹೆಚ್ಚುವರಿ ಡಿಸಿಪಿ ಹುದ್ದೆಗಳನ್ನು ಸೃಜಿಸಲಾಗುತ್ತಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ದಲಿತರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳೂ ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸಿ, ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

Advertisements

“ನೈತಿಕ ಪೋಲಿಸ್‍ಗಿರಿ ಮಾಡುವುದನ್ನು ಹಾಗೂ ಕಾನೂನನ್ನು ಕೈಗೆತ್ತಿಕೊಂಡರೆ ನಮ್ಮ ಸರ್ಕಾರ ಸಹಿಸುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ ಮನವಿ ಮೇರೆಗೆ ರಾಜ್ಯದ ಪೋಲಿಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

“ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಪೋಲಿಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಆನ್ ಲೈನ್ ನಲ್ಲಿ ಎಫ್‍ಐಆರ್ ದಾಖಲಿಸಲು ತೊಂದರೆಯಾಗುತ್ತಿದ್ದು ಈ ಬಗ್ಗೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ಸುವರ್ಣ ಪೋಲಿಸ್ ಭವನ ನಿರ್ಮಾಣ ಮಾಡಲಾಗುವುದು. ಸುವರ್ಣ ಮಹೋತ್ಸವದ ಅಂಗವಾಗಿ ಎಲ್ಲಾ ಪೊಲೀಸ್‌ನವರಿಗೆ ಬೆಳ್ಳಿ ಪದಕ ವಿತರಣೆ. ವೈದ್ಯಕೀಯ ತಪಾಸಣಾ ಭತ್ಯೆ 1000 ದಿಂದ 1500 ಕ್ಕೆ ಹೆಚ್ಚಳ. ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಸ್ಪಷ್ಟ ಸೂಚನೆ” ಎಂದರು.

“ಸರ್ಕಾರದ ನಿರ್ದೇಶನದ ಮೇರೆಗೆ ಕಳೆದ 6 ತಿಂಗಳಲ್ಲಿ ಪೋಲೀಸರು ದಾಳಿ ಮಾಡಿ 27 ಕೋಟಿ ಮೌಲ್ಯದ 4484 ಕೆಜಿ ಗಾಂಜಾ, 23 ಕೆಜಿ ರಾಸಾಯನಿಕ ಮಾದಕ ವಸ್ತುಗಳನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಇವೆಲ್ಲವನ್ನೂ ಫೆಬ್ರವರಿ ಮೊದಲ ವಾರದಲ್ಲಿ ನಾಶಪಡಿಸಲು ಅನುಮತಿ ನೀಡಲಾಗಿದೆ. ಮಾದಕ ವಸ್ತು ಹಾಗೂ ಸೈಬರ್ ಅಪರಾಧಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಪ್ರತಿ ಸಿಇಎನ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಬದಲಾಗಿ ಡಿವೈಎಸ್‍ಪಿ ಅಥವಾ ಎಸಿಪಿ ಮಟ್ಟದ ಅಧಿಕಾರಿಗಳ ನೇಮಕ ಮಾಡಲಾಗುವುದು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X