- ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ
- ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು: ಜಾರಕಿಹೊಳಿ
ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕೇ ವಿನಃ ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ಬಗ್ಗೆ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತವೆಂದು ಕಾದು ನೋಡೋಣ” ಎಂದು ತಿಳಿಸಿದ್ದಾರೆ.
“ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಉದ್ದೇಶವೇ ಬೇರೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಪಿಎಸ್‌ಐ ನೇಮಕಾತಿ | 545 ಹುದ್ದೆ ಜೊತೆ 400 ಹುದ್ದೆ ಸೇರಿಸಿ ಪರೀಕ್ಷೆ ನಡೆಸಲು ಚಿಂತನೆ: ಪರಮೇಶ್ವರ್
ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಪಾಲಿಟಿಕ್ಸ್ ಮತ್ತೆ ದೊಡ್ಡ ಸದ್ದು ಮಾಡುವ ಲಕ್ಷಣ ಕಾಣುತ್ತಿದೆ. ಜಿಲ್ಲಾ ರಾಜಕಾರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅತಿಯಾದ ಹಸ್ತಕ್ಷೇಪದ ವಿರುದ್ಧ ಸಿಡಿದೆದ್ದಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಮಾಧಾನ ಮಾಡುವ ಕೆಲಸ ನಡೆದಿರುವ ಬೆನ್ನಲ್ಲೇ ಜಾರಕಿಹೊಳಿ ಮಾತ್ರ ದಿನದಿಂದ ದಿನಕ್ಕೆ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತ ಕುತೂಹಲ ಮೂಡಿಸಿದ್ದಾರೆ.