ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕನ ವಿರುದ್ಧ ದೂರು

Date:

ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಹಿರಂಗ ಸಭೆಯೊಂದರಲ್ಲಿ ಆರೋಪ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಹರೀಶ್‌ ಪುಂಜಾ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಪುತ್ತೂರು ನಗರಸಭೆ ಸದಸ್ಯ ಮೊಹಮ್ಮದ್ ರಿಯಾಜ್‌ ಅವರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಶಾಸಕ ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು, ಸಿಎಂ ಸಿದ್ಧರಾಮಯ್ಯ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಓದಿದ್ದೀರಾ? ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

ಹರೀಶ್ ಪುಂಜಾ ಹೇಳಿದ್ದೇನು?

ಮೇ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಶಾಸಕ ಹರೀಶ್ ಪೂಂಜಾ, “24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ” ಎಂದು ತುಳು ಭಾಷೆಯಲ್ಲಿ ಹೇಳಿದ್ದರು.

ಇತ್ತೀಚೆಗೆ ಸಂಘಪರಿವಾರದಿಂದ ಹೊರಬಂದಿದ್ದ ಬಿಲ್ಲವ ಸಮುದಾಯದ ಮುಖಂಡ ಸತ್ಯಜಿತ್ ಸುರತ್ಕಲ್ ವಿರುದ್ಧ ಕಿಡಿಕಾರಿದ ಶಾಸಕ ಹರೀಶ್ ಪೂಂಜಾ, “ಸತ್ಯಣ್ಣ, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ, ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ? ಎಂದು ಜನ ಕೇಳುತ್ತಿದ್ದಾರೆ” ಎಂದು ಟೀಕಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷ ಸಂಘಟನೆ ಇಲ್ಲದ ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ: ಎಚ್‌ಡಿಕೆ

ಛಲದಿಂದ ಪಕ್ಷ ಕಟ್ಟುವ ಸಮರ್ಥರಿಗೆ ಅವಕಾಶ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ...

ಬಿಪರ್‌ಜಾಯ್‌ ಚಂಡಮಾರುತ; ಕೆಲವೆಡೆ ಸೃಷ್ಟಿಯಾದ ಅವಾಂತರ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬಿಪರ್‌ಜಾಯ್ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ...

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ...

ಯಾದಗಿರಿ | ಗೋಗಡಿಹಾಳ ಗ್ರಾಮದ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಕಕ್ಕೆ ಒತ್ತಾಯ

ಗೋಗಡಿಹಾಳ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಸರ್ಕಾರಿ...