ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು; ಅತ್ತ ಬಿಜೆಪಿ ವಾಗ್ದಾಳಿ

Date:

Advertisements

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಕೀಲರಾದ ನಟರಾಜ್ ಶರ್ಮಾ ಎಂಬುವರು ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಸಚಿವರ ಮೇಲೆ ಎರಡು ರೀತಿಯ ಆರೋಪಗಳನ್ನು ಮಾಡಲಾಗಿದೆ. ಅವರ ಪ್ರಕಾರ, ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಸರ್ಕಾರದ ವತಿಯಿಂದ ಸರಬರಾಜು ಮಾಡಲಾಗುವ ಪೌಷ್ಠಿಕ ಆಹಾರದ ಗುತ್ತಿಗೆಯನ್ನು ಆಯಾ ಊರುಗಳಲ್ಲಿರುವ ಸ್ಥಳೀಯ ಸಹಕಾರಿ ಸಂಸ್ಥೆಗಳಿಗೆ ನೀಡಬೇಕು ಎಂದು ಹೈಕೋರ್ಟ್ ಈ ಹಿಂದೆಯೇ ಹೇಳಿದೆ. ಆದರೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಂಗಳೂರಿನ ಸಂಸ್ಥೆಯೊಂದಕ್ಕೆ ಪೌಷ್ಠಿಕಾಂಶಯುಕ್ತ ಆಹಾರವನ್ನು ಸರಬರಾಜು ಮಾಡುವ ಗುತ್ತಿಗೆಯನ್ನು ಕ್ರಿಸ್ಟಿ ಫ್ರೈಡ್ ಗ್ರ್ಯಾಮ್ ಎಂಬ ಕಂಪನಿಗೆ ಪರೋಕ್ಷವಾಗಿ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

2011ರಲ್ಲಿ ಈ ಕಂಪನಿಯು ಇದೇ ರೀತಿಯ ಗುತ್ತಿಗೆಯನ್ನು ಪಡೆದುಕೊಂಡಿತ್ತು. ಆದರೆ, ಆ ಕಂಪನಿಯು ಸರಬರಾಜು ಮಾಡುತ್ತಿದ್ದ ಪೌಷ್ಠಿಕ ಆಹಾರದಲ್ಲಿ ಗುಣಮಟ್ಟದ ಕೊರತೆಯಿದ್ದಿದ್ದರಿಂದಾಗಿ ಆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿತ್ತು. ಆದರೆ, ಕಪ್ಪುಪಟ್ಟಿಗೆ ಸೇರಿಸಲಾಗಿರುವ ಕಂಪನಿಯ ಅಡಿಯಲ್ಲಿ ಮೂರು ಕಂಪನಿಗಳಿದ್ದು ಆ ಮೂರು ಕಂಪನಿಗಳಿಗೆ ಹೊಸ ಗುತ್ತಿಗೆಯನ್ನು ನೀಡಲಾಗಿದೆ ಎಂದು ನಟರಾಜ್ ಶರ್ಮಾ ಅವರು ಆರೋಪಿಸಿದ್ದಾರೆ.

Advertisements

ಕಪ್ಪುಪಟ್ಟಿಯಲ್ಲಿರುವ ಕಂಪನಿಗೆ ಗುತ್ತಿಗೆ ನೀಡುವುದು ತಪ್ಪು ಹಾಗೂ ಅದರ ವಿಳಾಸ ಬೆಂಗಳೂರಿನಲ್ಲಿರುವುದರಿಂದ ಸ್ಥಳೀಯ ಸಂಸ್ಥೆಗಳಿಗೆ ಗುತ್ತಿಗೆ ನೀಡಬೇಕೆಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತಾಗಿದೆ ಎಂದು ನಟರಾಜ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡುವಾಗ ವಿವರಿಸಿದ್ದಾರೆ. ಅಲ್ಲದೆ, ಶೇ. 10ರಷ್ಟು ಕಮೀಷನ್ ಪಡೆದು ದೊಡ್ಡ ಮೊತ್ತದ ಟೆಂಡರ್ ಅನ್ನು ಈ ಕಂಪನಿಗೆ ನೀಡಲಾಗಿದೆ ಎಂಬುದು ಅವರ ಮತ್ತೊಂದು ಆರೋಪ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜೆ.ಸಿ. ಪ್ರಕಾಶ್ ಹಾಗೂ ಇಲಾಖೆಯ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ದೂರಿದ್ದಾರೆ.

ಬಿಜೆಪಿ ವಾಗ್ದಾಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಅದಕ್ಕೆ ಅದರಲ್ಲಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಕ್ಸ್‌ ತಾಣದಲ್ಲಿ ವಾಗ್ದಾಳಿ ನಡೆಸಿದ್ದು, “ಬೆಳಗಾವಿಯಲ್ಲಿ ಬಾಣಂತಿಯರಿಗೆ, ಮಕ್ಕಳಿಗೆ ನೀಡಲಾಗುವ ಪೌಷ್ಠಿಕ ಆಹಾರದ ಟೆಂಡರ್‌’ನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಹಣ ಲೂಟಿ ಮಾಡಲಾಗಿದೆ. ಇದಕ್ಕೆ ಇಲಾಖಾಧಿಕಾರಿಗಳು ಮೇಲುಸಹಿ ಹಾಕಿರುವುದರಿಂದ ಇಲಾಖೆಯ ಹಿರಿಯ ಅಧಿಕಾರಿಗಳೇ ಈ ಭ್ರಷ್ಟಾಚಾರದಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಅಲ್ಲದೆ, ಇಡೀ ಸಚಿವಾಲಯವೇ ಭ್ರಷ್ಟಾಚಾರದಲ್ಲಿ ಮುಳುಗಿದೆ” ಎಂದು ಆರೋಪಿಸಿದೆ.

“ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆಯಲ್ಲೇ ಕೋಟಿ ಕೋಟಿ ಅಕ್ರಮ ಬಿಲ್‌ ಸಲ್ಲಿಸಿ ಕಲೆಕ್ಷನ್‌ ದಂಧೆ ನಡೆಸಲಾಗುತ್ತಿದೆ. ₹ 2 ಕೋಟಿ ನಕಲಿ ಬಿಲ್‌ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಚೇರಿಯಿಂದ ಮೇಲುಸಹಿ ಬೇರೆ ಪಡೆಯಲಾಗಿದೆ ಎಂದರೆ ಅಧಿಕಾರಿಗಳು ಮತ್ತು ಸಚಿವಾಲಯ ಭ್ರಷ್ಟಾಚಾರದಲ್ಲಿ ಹಾಸು ಹೊಕ್ಕಾಗಿದ್ದಾರೆ” ಎಂದು ಆರೋಪಿಸಿದೆ.

“ಬಾಣಂತಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರವನ್ನು ನೀವು ಈ ರೀತಿ ತಿಂದರೆ ಜನ ಕ್ಷಮಿಸುತ್ತಾರೆ ಎಂದು ಅಂದುಕೊಂಡಿದ್ದೀರಾ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೇ” ಎಂದು ಸಚಿವರನ್ನು ಬಿಜೆಪಿ ಪ್ರಶ್ನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ವಿಚಾರದ ಬಗ್ಗೆ ಸುದ್ದಿ ತಿಳಿದ ಮೇಲೆ ನನಗೆ ನಿರಾಶೆಯಾಗಿದೆ. ನಮ್ಮ ಸರ್ಕಾರದ ಅಧಿಕಾರಿಗಳು ನ್ಯಾಯಾಲಯ ಆದೇಶಗಳನ್ನು ಉಲ್ಲಂಘಿಸುವುದು ಅತ್ಯಂತ ಅಸಹನೀಯ. ನಿಜಕ್ಕೂ ನ್ಯಾಯ ನೀತಿಗೆ ಪೂರಕವಾಗಿ ಬೇಕಾದ ಕ್ರಮವನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ ನ್ಯಾಯಾಲಯದ ನಿರ್ಣಯವನ್ನು ಪೂರೈಸಬೇಕು ಮತ್ತು ಆ ನಿರ್ಣಯದಲ್ಲಿ ದೇಶದ ನ್ಯಾಯ ನೀತಿಗೆ ಪ್ರತಿಷ್ಠೆ ಕೊಡಬೇಕು. 🙏🏻🇮🇳 #ನ್ಯಾಯ #ಸರ್ಕಾರ #ಭ್ರಷ್ಟಾಚಾರ #ನ್ಯಾಯನೀತಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X