ರಾಜ್ಯಪಾಲರ ನಡೆ ಖಂಡಿಸಿ ಆ. 21ರಂದು ಪಂಜಿನ ಮೆರವಣಿಗೆಗೆ ಶೋಷಿತ ಸಮುದಾಯಗಳ ಒಕ್ಕೂಟ ಕರೆ

Date:

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.

- Advertisement -

ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರಜಿಲ್ಲೆಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ಗಾಂಧಿನಗರದ ಮೌರ್ಯ ವೃತ್ತದಲ್ಲಿ ಬುಧವಾರ ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಆರಂಭವಾಗಲಿದೆ ಎಂದು ಒಕ್ಕೂಟ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗೋ ಬ್ಯಾಕ್‌ ಗವರ್ನರ್‌

“ರಾಜ್ಯದಲ್ಲಿನ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದರೆ, ‘ಗೋ ಬ್ಯಾಕ್‌ ಗವರ್ನರ್‌’ ಚಳವಳಿ ಆರಂಭಿಸಬೇಕಾಗುತ್ತದೆ” ಎಂದು ಬೆಂಗಳೂರು ವಿ ವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ್‌ ಜಿ ಕೆ ಎಚ್ಚರಿಸಿದ್ದಾರೆ.

27ಕ್ಕೆ ರಾಜಭವನ ಚಲೋ

ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಕೂಡ ಮಾತನಾಡಿದ್ದು, “ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಇದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಇದನ್ನು ಖಂಡಿಸಿ ಇದೇ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...