ಜನರಿಗೆ ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರ್ಕಾರ’: ಕುಮಾರಸ್ವಾಮಿ ಕಿಡಿ

Date:

Advertisements
  • ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು
  • ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ

ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರ್ಕಾರ’ವನ್ನು ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ ಐದು ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಮತ್ತು ಅವರ ಜತೆ ನಿಲ್ಲುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

Advertisements

“ಹಾಲಿ ಮುಖ್ಯಮಂತ್ರಿ 2013-18ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 2.75 ಲಕ್ಷದಷ್ಟು ಸರ್ಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು” ಎಂದಿದ್ದಾರೆ.

“ಮುಗ್ಧ ಯುವಜನರಿಗೆ ರೂ. 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

“ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯವಾಗಿ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X