ಲೋಕಸಭೆ ಚುನಾವಣೆ | ಜಾತಿ ಗಣತಿ ನಡೆಸುವುದು ‘ಕಾಂಗ್ರೆಸ್‌ನ ಗ್ಯಾರಂಟಿ’ – ಜೈರಾಮ್ ರಮೇಶ್

Date:

“ದೇಶದಲ್ಲಿ ಜಾತಿ ಗಣತಿ ನಡೆಸುವುದು ನಮ್ಮ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಯಾಗಿದೆ” ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕೊನೆಯ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಮಹಾರಾಷ್ಟ್ರಕ್ಕೆ ಬರುವ ಮುನ್ನ ರಾಜ್ಯದ ನಂದೂರ್ಬಾರ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜೈರಾಮ್‌ ರಮೇಶ್ ಮಾತನಾಡಿದರು.

- Advertisement -

“ನಾವು ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತೇವೆ ಎಂದು ಭರವಸೆ ನೀಡಿದ್ದೇವೆ. ಇದು ನಮ್ಮ ಸಮಾಜದ ಎಕ್ಸ್‌ರೇಯಂತೆ. ಇದು ನಮ್ಮ ದೇಶದಲ್ಲಿರುವ ಬೇರೆ ಬೇರೆ ಜಾತಿಗಳ ಜನಸಂಖ್ಯೆ, ರಾಷ್ಟ್ರದ ಸಂಪತ್ತಿನಲ್ಲಿ ಅವರ ಪಾಲನ್ನು ತೋರಿಸುತ್ತದೆ. ಜೊತೆಗೆ ಪ್ರಜಾಪ್ರಭುತ್ವದಲ್ಲಿ ಅವರ ಪಾಲನ್ನೂ ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇನ್ನು “ಕಾಂಗ್ರೆಸ್ ಒಂದು ರಾಜಕೀಯ ಪಕ್ಷ, ಇದು ನೋಡುಗರ ಗುಂಪೇನಲ್ಲ. ಚುನಾವಣೆಯಲ್ಲಿ ನಾವು ಸೋಲಬಹುದು, ಗೆಲ್ಲಬಹುದು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಾತ್ರ ಸಮಾಜವನ್ನು ವಿಭಜಿಸಲು ಎಲ್ಲ ಪ್ರಯತ್ನವನ್ನು ಮಾಡುತ್ತಿದೆ, ಇದಕ್ಕಾಗಿ ಸಿಗುವ ಯಾವುದೇ ಅವಕಾಶವನ್ನು ಬಿಡುತ್ತಿಲ್ಲ” ಎಂದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, “ನಮ್ಮ ದೇಶ ಪ್ರಧಾನಿ ಮೋದಿಯವರ ವರ್ತನೆ ಮತ್ತು ನೀತಿಗಳಿಂದಾಗಿ ವಿಭಜನೆಯಾಗುತ್ತಿದೆ. ಬಿಜೆಪಿಯವರ ಗಮನ ಎಂದಿಗೂ ಕೂಡಾ ಸಮಾಜವನ್ನು ಒಡೆಯುವುದರ ಮೇಲೆ ಇರುತ್ತದೆ” ಎಂದಿದ್ದು, “ಭಾರತ್ ಜೋಡೊ ನ್ಯಾಯ ಯಾತ್ರೆ ಯಾವುದೇ ಚುನಾವಣಾ ಪ್ರಚಾರದ ಭಾಗವಲ್ಲ, ಇದು ರಾಜಕೀಯ ರ್‍ಯಾಲಿ” ಎಂದರು.

ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಜಾತಿ ಗಣತಿ ಅಭಿಯಾನದ ಭಾಗವಾಗಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ #Gintikaro (ಲೆಕ್ಕ ಹಾಕು) ಹ್ಯಾಷ್‌ ಟ್ಯಾಗ್ ಅನ್ನು ಸೇರಿಸಿದ್ದಾರೆ. ಇನ್ನು ಎಲ್ಲಾ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ಎಕ್ಸ್‌ ಬಯೋನಲ್ಲಿ ಇದನ್ನು ಸೇರಿಸಲು ತಿಳಿಸಲಾಗಿದೆ ಎಂಬ ಮಾಹಿತಿಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...