ಪತ್ರಕರ್ತರ ಸಮ್ಮೇಳನ | ಊಹಾ ಪತ್ರಿಕೋದ್ಯಮ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ ಅಭಿಮತ

Date:

Advertisements

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಅದು ಸಮಾಜದ ಪರವಾಗಿರುತ್ತದೆ. ಪತ್ರಿಕಾವೃತ್ತಿ ಉದ್ಯಮವಾದ ಕೂಡಲೇ ಅದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿ, “ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ” ಎಂದು ಪತ್ರಕರ್ತರಿಗೆ ಕರೆ ನೀಡಿದರು.

ಪ್ರತಿಯೊಬ್ಬರೂ ಸಂವಿಧಾನ ಓದಬೇಕು

Advertisements

“ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ. ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ. ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡುತ್ತಿದ್ದಾರೆ. ಈ ಎಚ್ಛರಿಕೆ ಸದಾ ಇರಲಿ” ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

“ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ” ಎಂದರು.

ರಾಜಣ್ಣ ನೀನು ಮನುಸ್ಮೃತಿ ಓದು

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು "ಜಾತಿ-ಕೆಳ ಜಾತಿ" ಎನ್ನುವ ಪದ ಬಳಸಿದರು.

ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರಿದವರು, ಹಿಂದುಳಿದವರು ಎಂದು ಹೇಳಬಹುದು ಎಂದರು. ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು "ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರಿಸಿದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X