ಸೆಬಿ ಮುಖ್ಯಸ್ಥರ ರಾಜೀನಾಮೆ, ಹಿಂಡೆನ್‌ಬರ್ಗ್ ಆರೋಪಗಳ ಕುರಿತ ಜೆಪಿಸಿ ತನಿಖೆಗೆ ಆಗ್ರಹ; ಆ.22ರಂದು ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

Date:

ಸೆಬಿ ಮುಖ್ಯಸ್ಥರು ಮತ್ತು ಉದ್ಯಮ ಅದಾನಿ ನಡುವಿನ ವ್ಯವಹಾರಿಕ ಸಂಬಂಧದ ಬಗ್ಗೆ ಹೆಂಡೆನ್‌ಬರ್ಗ್‌ ವರದಿ ಆರೋಪಗಳನ್ನು ಮಾಡಿದೆ ಈ ಆರೋಪಗಳು ದೇಶಾದ್ಯಂತ ಭಾರೀ ಗದ್ದಲ ಸೃಷ್ಟಿಸಿವೆ. ಕೇಂದ್ರ ಸರ್ಕಾರದ ವಿರುದ್ಧ ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಿವೆ. ಇದೆಲ್ಲದರ ನಡುವೆ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ರಾಜೀನಾಮೆ ನೀಡಬೇಕು ಮತ್ತು ಅದಾನಿ ಸಂಸ್ಥೆಯ ಬಗ್ಗೆ ಕೇಳಿಬಂದಿರುವ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಆಗಸ್ಟ್ 22ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ.

- Advertisement -

ಆಗಸ್ಟ್ 10ರಂದು ‘ಹಿಂಡೆನ್‌ಬರ್ಗ್ ರಿಸರ್ಚ್‌’ ವರದಿಯನ್ನು ಬಿಡುಗಡೆ ಮಾಡಿದ್ದು, ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅವರು ಅದಾನಿ ಹಣ ಹಗರಣದಲ್ಲಿ ಬಳಸಲಾಗಿರುವ ವಿದೇಶಿ ಹೂಡಿಕೆ ಮತ್ತು ನಿಧಿಗಳಲ್ಲಿ ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ವರದಿ ಬಂದ ಬಳಿಕ, ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್‌ನ ಎಲ್ಲ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಎಐಸಿಸಿ ರಾಜ್ಯ ಉಸ್ತುವಾರಿಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಿದ್ದಾರೆ. “ಸೆಬಿ ಮತ್ತು ಅದಾನಿ ನಡುವಿನ ಸಂಬಂಧಗಳ ಬಗ್ಗೆ ಆಘಾತಕಾರಿ ವರದಿಯು ಬಹಿರಂಗವಾಗಿದೆ. ಆ ಬಗ್ಗೆ ಸಂಪೂರ್ಣ ತನಿಖೆಯ ಅಗತ್ಯವಿದೆ. ಷೇರು ಮಾರುಕಟ್ಟೆಯಲ್ಲಿನ ಸಣ್ಣ ಹೂಡಿಕೆದಾರರ ಹಣವನ್ನು ಅಪಾಯಕ್ಕೆ ಸಿಲುಕಿಸಲು ಯತ್ನಿಸಲಾಗಿದೆ. ಅದನ್ನು ತಡೆಯಬೇಕು” ಎಂದು ಖರ್ಗೆ ಹೇಳಿದ್ದಾರೆ.

ಸಭೆಯ ಬಳಿಕ ಟ್ವೀಟ್ ಮಾಡಿರುವ ಅವರು, “ಮೋದಿ ಸರ್ಕಾರವು ತಕ್ಷಣವೇ ಸೆಬಿ ಅಧ್ಯಕ್ಷರಿಂದ ರಾಜೀನಾಮೆ ಪಡೆಬೇಕು. ಸೆಪಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ತನಿಖೆ ನಡೆಸಲು ಜೆಪಿಸಿಯನ್ನು ರಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸಭೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ ವೇಣುಗೋಪಾಲ್, “ಸೆಬಿ ಮುಖ್ಯಸ್ಥರ ರಾಜೀನಾಮೆ ಮತ್ತು ಅದಾನಿ ವಿಷಯದ ಬಗ್ಗೆ ಜೆಪಿಸಿ ತನಿಖೆಗೆ ಒತ್ತಾಯಿಸಿ ಆಗಸ್ಟ್ 22ರಂದು ಪಕ್ಷವು ರಾಷ್ಟ್ರವ್ಯಾಪಿ ಆಂದೋಲನ ನಡೆಸಲಿದೆ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಆರ್ಥಿಕ ಅಸ್ಥಿರತೆ ಮತ್ತು ಅವ್ಯವಸ್ಥೆಯನ್ನು ಸೃಷ್ಟಿಸುವ ಪಿತೂರಿ ನಡೆಸುತ್ತಿದೆ. ಈ ಅಕ್ರಮವು ಅದರ ಪಿತೂರಿಯ ಭಾಗವಾಗಿದೆ” ಎಂದು ಆರೋಪಿಸಿದೆ.

ಹಿಂಡೆನ್‌ಬರ್ಗ್‌ನ ಆರೋಪಗಳನ್ನು ಸೆಬಿ ತಳ್ಳಿಹಾಕಿದೆ. “ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಸೂಕ್ತ ತನಿಖೆ ಮಾಡಲಾಗಿದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...