ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಬುನಾದಿ ಭದ್ರಗೊಳಿಸಲು ಶ್ರಮಿಸಬೇಕು; ಕನ್ನಯ್ಯ ಕುಮಾರ್

Date:

Advertisements

ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಏಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಹೇಳಿದ್ದಾರೆ.

ಭಾರತದ ಬುನಾದಿ ಎಂದರೆ ಅದು “ಇಂಡಿಯಾ”. ಇಂಡಿಯಾ ಎಂದರೆ ಒಂದು ಆಲೋಚನೆ. ಇಂಡಿಯಾವನ್ನು ಗಟ್ಟಿಗೊಳಿಸುವ ಕಲಸವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಆಯೋಜಿಸಿರುವ ಮೂರು ದಿನಗಳ “ಉತ್ತಮ ಭಾರತದ ಅಡಿಪಾಯ” ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಎರಡನೇ ದಿನವಾದ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಯುವ ಕಾಂಗ್ರೆಸ್ ಗಾಂಧಿವಾದದ ಮೂಲಕ ಪಕ್ಷದ ಬುನಾದಿಯನ್ನು ಗಟ್ಟಿಗೊಳಿಸಬೇಕು. ಯುವ ಕಾಂಗ್ರೆಸ್ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಸ್ಥಿತಿಲ್ಲಿಯಲ್ಲಿದ್ದು, ಯುವ ಸಮೂಹದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕು ಎಂದರು.

Advertisements

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಒಕ್ಕೂಟದ ಸಂಸದರಿಂದ ಜುಲೈ 29-30 ರಂದು ಮಣಿಪುರ ಭೇಟಿ

ಯುವ ಕಾಂಗ್ರೆಸ್ ಸತ್ಯಕ್ಕಾಗಿ ಸಂಘರ್ಷ ನಡೆಸುತ್ತಿದ್ದು, ನಮ್ಮ ಹಿರಿಯ ನಾಯಕರ ಆಶಯಗಳನ್ನು ಎಂದಿಗೂ ಮರೆಯಬಾರದು. ಯುವ ಜನರಿಗಾಗಿ ಏನು ಮಾಡಬೇಕು ಎಂಬುದನ್ನು ಅರಿಯಬೇಕು. ದೇಶ ಇಂದು ಪಂಡಿತ್ ಜವಾಹರ್ ಲಾಲ್ ನೆಹರು ಅವರ ಕೈಯಲ್ಲಿಲ್ಲ. ಅಂಬೇಡ್ಕರ್, ಭಗತ್ ಸಿಂಗ್ ಅವರ ಕೈಯಲ್ಲಿಲ್ಲ. ತನ್ನ ಪತ್ನಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶ ಇದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಇತಿಹಾಸ ಕಾಂಗ್ರೆಸ್ ಹೊಂದಿದ್ದು, ಸತ್ಯ ಹೇಳುವವರು ಎಂದಿಗೂ ಹೆದರಬಾರದು. ಸುಳ್ಳು ಹೇಳುವವರಿಗೆ ಹೆದರಿಕೆ ಸಹಜ. ಈ ದೇಶ ಪ್ರತಿಯೊಬ್ಬರಿಗೂ ಸೇರಿದ್ದು, ಎಲ್ಲರಿಗಾಗಿ ನಾವು ಹೋರಾಟ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ, ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X