ಲೋಕಸಭೆ ಫಲಿತಾಂಶ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ: ಡಿ ಕೆ ಶಿವಕುಮಾರ್

Date:

Advertisements

ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ತಿರುಗೇಟು ನೀಡಿದರು.

ಕರ್ನಾಟಕದಲ್ಲಿ ಶಿಂದೆ ತರದವರು ಇದ್ದಾರೆಯೇ ಎಂದು ಕೇಳಿದಾಗ, “ಅವರಲ್ಲಿ ಆ ತರದವರು ಇರಬಹುದು. ನಮ್ಮಲ್ಲಿ ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ” ಎಂದು ಹೇಳಿದರು.

Advertisements

ಪರಿಷತ್ ಚುನಾವಣೆ: ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ. ಪಕ್ಷದ ಆರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮಗಿದೆ. ಪದವೀಧರರ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅರಿವಿದೆ. ಇವರ ಬದುಕಿನ ಬಗ್ಗೆ ನಮಗೆ ಕಾಳಜಿ ಇರುವ ಕಾರಣ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇವರ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

“ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೂತನ ಶಿಕ್ಷಣ ನೀತಿ ಸೇರಿದಂತೆ ಇತರೇ ಸಮಸ್ಯೆಗಳ ನಿವಾರಣೆ ಬಗ್ಗೆ ಹೇಳಿದ್ದೇವೆ. ನಿರುದ್ಯೋಗಿ ಪದವೀಧರರ ಸಮಸ್ಯೆ ನಿವಾರಣೆಗೆ ನಾವು ಕೆಲಸ ಮಾಡಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಈ ವರ್ಗಕ್ಕೆ ಏನಾದರೂ ಸಹಾಯ ಮಾಡಿದೆಯೇ? ಇಲ್ಲ. ಒಟ್ಟಿನಲ್ಲಿ ಇವರ ಕೆಲಸಗಳು ಆಗಬೇಕು. ಜವಾಬ್ದಾರಿ ನಮ್ಮದು. ಶಿಕ್ಷಕರು, ಪದವೀಧರರ ಮೇಲೆ ನಮಗೆ ವಿಶ್ವಾಸವಿದೆ ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X