ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ‘ಕೆಎಸ್‌ಟಿ’ ಆರೋಪಕ್ಕೆ ಜೆಡಿಎಸ್‌ ಕಿಡಿ

Date:

Advertisements
  • ಕಾಂಗ್ರೆಸ್‌ ಜೆಡಿಎಸ್‌ ನಡುವೆ ‘ವೈಎಸ್‌ಟಿ’ – ‘ಕೆಎಸ್‌ಟಿ’ ವಾಕ್ಸಮರ
  • ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ವರ್ಗಾವಣೆ ದಂಧೆ ಆರೋಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ವರ್ಗಾವಣೆ ದಂಧೆ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಜಿಎಸ್​ಟಿ ಜೊತೆಗೆ ವೈಎಸ್​ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್​) ಸಂಗ್ರಹವಾಗುತ್ತಿದೆ ಎಂದಿದ್ದರು. ಇದಕ್ಕೆ ಪ್ರತಿಕ್ರೀಯಿಸಿರುವ ಕಾಂಗ್ರೆಸ್​ ಸಹ ಕುಮಾರಸ್ವಾಮಿ ವಿರುದ್ಧ ವೈಎಸ್​ಟಿಗೆ ಪ್ರತಿಯಾಗಿ ಕೆಎಸ್​ಟಿ ಆರೋಪ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ವೆಸ್ಟ್​ ಎಂಡ್​​ ಹೋಟೆಲ್​ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿಯವರೇ? ಅಲ್ಲಿ ಖಾಯಂ ಅಡ್ಡ ತೆರೆದಿದ್ದೀರಿ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ಹೋಟೆಲ್​ಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ ‘ಕೆಎಸ್​ಟಿ’ (ಕುಮಾರಸ್ವಾಮಿ ಸರ್ವಿಸ್‌ ಟ್ಯಾಕ್ಸ್‌) ಸಂಗ್ರಹದ ಹಣ ಬಳಸುತ್ತಿದ್ದೀರಾ? ‘ಕೆಎಸ್‌ಟಿ ಕುಮಾರ್’ ಅವರು ಉತ್ತರಿಸಬೇಕು” ಎಂದು ತಿರುಗೇಟು ನೀಡಿದೆ.

ಕಾಂಗ್ರೆಸ್​ ಟ್ವೀಟ್​ಗೆ ಜೆಡಿಎಸ್​ ಸರಣಿ ಟ್ವೀಟ್​ ಮಾಡಿದ್ದು, “ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ. ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ ಹೊಸ ವರಸೆ ಮತ್ತು ಹೊಸ ಕಸವರಿಕೆ” ಎಂದು ತಿರುಗೇಟು ನೀಡಿದೆ.

Advertisements

“ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವೈಎಸ್‌ಟಿ ಟ್ಯಾಕ್ಸ್‌ ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ಅವಿವೇಕ ‘ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ” ಎಂದು ಕುಟುಕಿದೆ.

ಈ ಸುದ್ದಿ ಓದಿದ್ದೀರಾ? ಮೂರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಕಿಡಿ

“ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ. ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ” ಎಂದು ಜೆಡಿಎಸ್‌ ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಕಾಲೆಳೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X