ಯುವಕ್ರಾಂತಿ ಸಮಾವೇಶ | ಪ್ರತಿ ತಿಂಗಳು ಯುವ ನಿಧಿ ಹೆಸರಲ್ಲಿ ನಿರುದ್ಯೋಗ ಭತ್ಯೆ ಘೋಷಿಸಿದ ಕಾಂಗ್ರೆಸ್‌

Date:

  • ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ. 10 ಲಕ್ಷ ಯುವಕರಿಗೆ ಉದ್ಯೋಗ
  • ಪದವೀಧರರಿಗೆ 3,000, ಡಿಪ್ಲಮೋ ಪದವೀಧರರಿಗೆ 1,500 ರೂ. ಭತ್ಯೆ: ರಾಹುಲ್‌ ಗಾಂಧಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲಮೋ ಪದವೀಧರರಿಗೆ 1,500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದರು.

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ಸೋಮವಾರ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೂಡಿ ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿ ಮಾತನಾಡಿದರು.

“ಕರ್ನಾಟಕದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಭಾರತ್‌ ಜೋಡೋ ಯಾತ್ರೆ ಸಮಯದಲ್ಲಿ ಯುವಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿದೆ. ಕೇವಲ ಯುವಕರು ಮಾತ್ರವಲ್ಲ ಎಲ್ಲ ವರ್ಗದ ಜನರು ಕೂಡ ರಾಜ್ಯ ಸರ್ಕಾರವನ್ನು ದೇಶದ ಅತ್ಯಂತ ಭ್ರಷ್ಟ ಸರ್ಕಾರ, 40% ಕಮಿಷನ್ ಸರ್ಕಾರ ಎಂದು ಕರೆಯುತ್ತಿದ್ದಾರೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ಪ್ರತಿ ಪಧವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1,500 ರೂ.ಗಳನ್ನು ಎರಡು ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ. ಇನ್ನು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಖಾಲಿ ಇರುವ 2.50 ಲಕ್ಷ ಉದ್ಯೋಗ ಭರ್ತಿ ಮಾಡಲಾಗುವುದು” ಎಂದು ಭರವಸೆ ವ್ಯಕ್ತಪಡಿಸಿದರು.

“ಯಾತ್ರೆ ಸಮಯದಲ್ಲಿ ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡಿದ್ದರು. ಅವರ ಕಷ್ಟಕ್ಕೆ ಪರಿಹಾರ ನೀಡಲು ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ” ಎಂದರು.

ರಾಜ್ಯ ಸರ್ಕಾರದ ಮೇಲೆ ಯುವಕರ ದೂರು

“ಗುತ್ತಿಗೆದಾರರ ಸಂಘ, ಶಾಲಾ ಸಂಸ್ಥೆಗಳು ಪ್ರಧಾನಿಗೆ ಪತ್ರ ಬರೆದು ಕರ್ನಾಟಕದಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರು ನೀಡಿದ್ದರೂ ಪ್ರಧಾನಮಂತ್ರಿಗಳು ಈವರೆಗೂ ಉತ್ತರ ನೀಡಿಲ್ಲ. ಮೈಸೂರು ಸ್ಯಾಂಡಲ್ ಸೋಪ್ ಕಾರ್ಪೊರೇಷನ್ ನಲ್ಲಿ ಹಗರಣ ನಡೆದು ಶಾಸಕನ ಪುತ್ರ ಸಿಕ್ಕಿಬಿದ್ದಾಗ 8 ಕೋಟಿ ಸಿಗುತ್ತದೆ. ಸರ್ಕಾರ ಅವರ ರಕ್ಷಣೆ ಮಾಡುತ್ತದೆ. ಪಿಎಸ್ಐ ನೇಮಕಾತಿ, ಸಹಾಯಕ ಪ್ರಾದ್ಯಾಪಕ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಎಲ್ಲ ಆರೋಪ ಲಕ್ಷಾಂತರ ಯುವಕರ ದೂರಾಗಿದೆ” ಎಂದರು.

“ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಿ ಪ್ರಚಂಡ ಜಯಗಳಿಸಿ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಡಬೇಕು. ರಾಜ್ಯ ಚುನಾವಣೆ ಸಮಯದಲ್ಲಿ ನೀವು ಯಾವ ಜಿಲ್ಲೆಗೆ ಹೇಳುತ್ತೀರೋ ಅಲ್ಲಿಗೆ ನಾನು ಬರಲು ಸಿದ್ಧ. ನಾವೆಲ್ಲರೂ ಸೇರಿ ಬಿಜೆಪಿ ಮಣಿಸೋಣ” ಎಂದು ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರಿಂದ ಪ್ರಕಟಣೆ

ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್...

ದಾವಣಗೆರೆ | ಗಾಂಧಿ ಜಯಂತಿ ಆಚರಣೆ

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ...

ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ...

ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು...