ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಬಾಕಿ ಉಳಿಸಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಮಾತ್ರ ಕಾಯ್ದಿರಿಸಿದೆ.
ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್ ಸಚಿವ ಎಚ್ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ಗೆ ನೀಡಲಾಗಿದೆ.
ಚಿಕ್ಕಬಳ್ಳಾಪುರದಿಂದ ಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದೆ. ಈ ಟಿಕೆಟ್ ಘೋಷಣೆಯ ಮೂಲಕ ಕಾಂಗ್ರೆಸ್ ಒಟ್ಟು 28 ಕ್ಷೇತ್ರಗಳ ಪೈಕಿ 27 ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ.
ಕಗ್ಗಂಟಾದ ಕೋಲಾರ!
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ನ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವ ಕಾರಣ, ಬಣ ರಾಜಕೀಯ ಪ್ರಾರಂಭವಾಗಿತ್ತು. ಸಚಿವ ಮುನಿಯಪ್ಪ ತನ್ನ ಅಳಿಯನಿಗೆ ಟಿಕೆಟ್ ನೀಡಲು ಶ್ರಮಿಸುತ್ತಿದ್ದಾರೆ. ಆದರೆ ಇದಕ್ಕೆ ರಮೇಶ್ ಕುಮಾರ್ ಬಣ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಐವರು ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆ ಬಳಿಕ ನಿನ್ನೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂಧಾನ ನಡೆಸಿದ್ದರು.
