ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಜ.8ರಿಂದ ಕಾಂಗ್ರೆಸ್‌ನಿಂದ ‘ಮನರೇಗಾ ಬಚಾವೋ ಅಭಿಯಾನ’

Date:

ವಿಬಿ-ಜಿ ರಾಮ್ ಜಿ ಕಾಯ್ದೆಯ ವಿರುದ್ಧವಾಗಿ ಮತ್ತು ಮನರೇಗಾ ರದ್ಧತಿ ವಿರುದ್ಧವಾಗಿ ಕಾಂಗ್ರೆಸ್ ಶನಿವಾರ ಜನವರಿ 8ರಿಂದ ರಾಷ್ಟ್ರವ್ಯಾಪಿ ಆಂದೋಲನವನ್ನು ಘೋಷಿಸಿದೆ. ವಿಬಿ-ಜಿ ರಾಮ್ ಜಿ ಕಾಯ್ದೆ ಮನರೇಗಾವನ್ನು ಮೌನವಾಗಿ ಕೊಲ್ಲುತ್ತದೆ ಎಂದು ಹೇಳಿರುವ ಕಾಂಗ್ರೆಸ್ ‘ಮನರೇಗಾ ಬಚಾವೋ ಅಭಿಯಾನ’ ನಡೆಸುವುದಾಗಿ ಘೋಷಿಸಿದೆ.

- Advertisement -

ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಹಿರಿಯ ನಾಯಕ ಜೈರಾಮ್ ರಮೇಶ್ ಈ ಘೋಷಣೆ ಮಾಡಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವೇಣುಗೋಪಾಲ್, “ಕೇಂದ್ರ ಸರ್ಕಾರ ಜಾರಿಗೆ ತಂದ ವಿಬಿ ಜಿ ರಾಮ್‌ಜಿ ಕಾನೂನಿಗ ಬಗ್ಗೆ ಗಂಭೀರ ಚರ್ಚೆ ನಡೆಸಿ ನಾವು ಈ ಅಭಿಯಾನ ನಡೆಸುವ ನಿರ್ಧಾರ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಮನರೇಗಾ ಹೆಸರು ಬದಲಾವಣೆ ವಿರುದ್ಧ ಅಭಿಯಾನ: ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಘೋಷಣೆ

ಈ ಹೊಸ ಕಾನೂನನ್ನು ಹಾನಿಕಾರಕ ಎಂದು ಕರೆದ ವೇಣುಗೋಪಾಲ್, “ಈ ಕಾನೂನು ಮನರೇಗಾವನ್ನು ಕೊಲ್ಲುತ್ತದೆ. ಮನರೇಗಾದಿಂದ ವಲಸೆ ಕಡಿಮೆಯಾಗಿತ್ತು. ರಸ್ತೆಗಳು, ಕಾಲುವೆಗಳು, ಅಣೆಕಟ್ಟುಗಳು ಸೃಷ್ಟಿಯಾಗಿದ್ದವು. ಕೋವಿಡ್ ಸಂದರ್ಭದಲ್ಲಿ, ಆರ್ಥಿಕ ಬಿಕ್ಕಟ್ಟಿನಲ್ಲಿ ಮನರೇಗಾ ದೇಶದ ಜನರಿಗೆ ರಕ್ಷಣೆಯಾಗಿತ್ತು” ಎಂದು ಹೇಳಿದ್ದಾರೆ.

“ಉದ್ಯೋಗವು ಇನ್ನು ಖಾತರಿಯಲ್ಲ. ಸರ್ಕಾರದ ಬದಲಾಗಿ ಪಂಚಾಯತ್‌ಗಳ ಮೂಲಕ ಮಾತ್ರ ಕೆಲಸ ಒದಗಿಸಲಾಗುತ್ತದೆ. ಬಜೆಟ್ ಮಿತಿಯನ್ನೂ ಒಳಗೊಂಡಿದೆ. ಇದು ಕೆಲಸ ಮಾಡುವ ಕಾನೂನುಬದ್ಧ ಹಕ್ಕನ್ನು ಮೌನವಾಗಿ ಕೊಲ್ಲುತ್ತದೆ” ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.

“ಮನರೇಗಾ ಒಂದು ವಿಕೇಂದ್ರೀಕೃತ ಯೋಜನೆಯಾಗಿತ್ತು. ಈಗ ಎಲ್ಲವೂ ದೆಹಲಿಯಲ್ಲಿರುವ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ, ಹಳ್ಳಿಗಳು ಬಳಲುತ್ತವೆ. ಅನೇಕ ಪಂಚಾಯತ್‌ಗಳಿಗೆ ಹಣ ಸಿಗುವುದಿಲ್ಲ. ಈ ಕಾಯ್ದೆಯು ಸಂವಿಧಾನವನ್ನು ಉಲ್ಲಂಘಿಸುತ್ತದೆ” ಎಂದು ದೂರಿದ್ದಾರೆ.

ರೈತರ ಆಂದೋಲನವನ್ನು ಉಲ್ಲೇಖಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಮೂರು ಕೃಷಿ ಕಾನೂನುಗಳ ಪ್ರತಿಭಟನೆಯು ದೆಹಲಿ ಕೇಂದ್ರಿತವಾಗಿತ್ತು. ಆದರೆ ಮನರೇಗಾ ಬಚಾವೊ ಅಭಿಯಾನವು ದೆಹಲಿ ಕೇಂದ್ರಿತವಾಗಿರುವುದಿಲ್ಲ. ಇದು ರಾಜ್ಯ, ಜಿಲ್ಲೆ, ಬ್ಲಾಕ್ ಮತ್ತು ಪಂಚಾಯತ್ ಮಟ್ಟದಲ್ಲಿ ನಡೆಯುತ್ತದೆ” ಎಂದು ತಿಳಿಸಿದರು.

ಇನ್ನು “ಅಭಿಯಾನವು ಜನವರಿ 8ರಂದು ಪ್ರಾರಂಭವಾಗಿ 45 ದಿನಗಳವರೆಗೆ ನಡೆಯಲಿದೆ. ಇದು ರಾಷ್ಟ್ರೀಯ ಚಳುವಳಿಯಾಗಿರುತ್ತದೆ. ಅಗತ್ಯವಿದ್ದರೆ, ನಾವು ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ರೈತರ ಹೋರಾಟದಿಂದಾಗಿ ಮೂರು ಕರಾಳ ಕೃಷಿ ಕಾನೂನು ಏನಾಯಿತೋ ಅದೇ ರೀತಿಯ ಫಲಿತಾಂಶ ಈ ಅಭಿಯಾನದಿಂದ ಹೊರಹೊಮ್ಮಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...