28 ಲೋಕಸಭಾ ಕ್ಷೇತ್ರಗಳಿಗೆ ಸಂಯೋಜಕರ ಪರಿಷ್ಕೃತ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

Date:

ಮುಂಬರುವ ಲೋಕಸಭಾ ಚುನಾವಣೆಗಾಗಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎಐಸಿಸಿ ಅನುಮೋದಿಸಿರುವ ಲೋಕಸಭಾ ಕ್ಷೇತ್ರವಾರು ಸಂಯೋಜಕರ ಪರಿಷ್ಕೃತ ಪಟ್ಟಿಯನ್ನು ಕೆಪಿಸಿಸಿ ಪ್ರಕಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

- Advertisement -

20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್, ಕ್ಷೇತ್ರವಾರು ವೀಕ್ಷಕರನ್ನು ನೇಮಿಸಿದೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂದು ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವೀಕ್ಷಕರಾಗಿರುವ ಸಚಿವರ ಮೇಲೆ ನಿಗಾ ವಹಿಸಲಿದ್ದು, ಕಾಲಕಾಲಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬೆಂಗಳೂರು ಕೇಂದ್ರಕ್ಕೆ ಜಮೀರ್ ಅಹಮ್ಮದ್ ಖಾನ್, ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೃಷ್ಣಬೈರೇಗೌಡ, ಬೆಂಗಳೂರು ಗ್ರಾಮಾಂತರಕ್ಕೆ ಡಾ. ಎಂ ಸಿ ಸುಧಾಕರ್‌, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಅವರುಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ; ಅನುಮತಿಗಾಗಿ ಯುಪಿ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ

ಬೆಳಗಾವಿ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬಳ್ಳಾರಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ನಾಗೇಂದ್ರ, ಬೀದರ್ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ, ವಿಜಯಪುರ ಎಸ್ಸಿ ಮೀಲಸು ಕ್ಷೇತ್ರಕ್ಕೆ ಎಂ ಬಿ ಪಾಟೀಲ್‌, ಚಾಮರಾಜನಗರ ಎಸ್ಸಿ ಮೀಸಲು ಕ್ಷೇತ್ರಕ್ಕೆ ಸಚಿವ ಕೆ.ವೆಂಕಟೇಶ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೆ ಚ್‌ ಮುನಿಯಪ್ಪ, ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌, ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರಕ್ಕೆ ಡಿ ಸುಧಾಕರ್‌, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ದಿನೇಶ್‌ ಗುಂಡೂರಾವ್‌, ದಾವಣಗೆರೆ ಕ್ಷೇತ್ರಕ್ಕೆ ಎಸ್‌ ಎಸ್‌ ಮಲ್ಲಿಕಾರ್ಜುನ, ಧಾರವಾಡ ಕ್ಷೇತ್ರಕ್ಕೆ ಸಂತೋಷ್‌ ಲಾಡ್‌ ಅವರನ್ನು ನೇಮಿಸಲಾಗಿದೆ.

ಕಲಬುರಗಿ ಎಸ್ಸಿ ಮೀಸಲು ಕ್ಷೇತ್ರಕ್ಕೆ ಪ್ರಿಯಾಂಕ್‌ ಖರ್ಗೆ, ಹಾಸನ ಕ್ಷೇತ್ರಕ್ಕೆ ಕೆ ಎನ್‌ ರಾಜಣ್ಣ, ಹಾವೇರಿ ಕ್ಷೇತ್ರಕ್ಕೆ ಎಚ್‌ ಕೆ ಪಾಟೀಲ, ಕೋಲಾರ ಎಸ್ಸಿ ಮೀಸಲು ಕ್ಷೇತ್ರಕ್ಕೆ ಬೈರತಿ ಸುರೇಶ್‌, ಕೊಪ್ಪಳ ಕ್ಷೇತ್ರಕ್ಕೆ ಶಿವರಾಜ ತಂಗಡಗಿ, ಮಂಡ್ಯ ಕ್ಷೇತ್ರಕ್ಕೆ ಚಲುವರಾಯಸ್ವಾಮಿ ನೇಮಕವಾಗಿದ್ದಾರೆ.

ಮೈಸೂರು ಕ್ಷೇತ್ರಕ್ಕೆ ಎಚ್‌ ಸಿ ಮಹದೇವಪ್ಪ, ರಾಯಚೂರು ಎಸ್ಟಿ ಮೀಸಲು ಕ್ಷೇತ್ರಕ್ಕೆ ಎನ್‌ ಎಸ್‌ ಬೋಸರಾಜು, ಶಿವಮೊಗ್ಗ ಕ್ಷೇತ್ರಕ್ಕೆ ಮಧು ಬಂಗಾರಪ್ಪ, ತುಮಕೂರು ಕ್ಷೇತ್ರಕ್ಕೆ ಡಾ. ಜಿ ಪರಮೇಶ್ವರ್‌, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೆ ಜೆ ಜಾರ್ಜ್‌ ಹಾಗೂ ಉತ್ತರ ಕನ್ನಡ ಕ್ಷೇತ್ರಕ್ಕೆ ಮಂಕಾಳ ವೈದ್ಯ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...

KPSC ಅಕ್ರಮ ಪ್ರಕರಣ; IAS ಅಧಿಕಾರಿ ಗಂಗ್ವಾರ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ...

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ; 2.9 ತೀವ್ರತೆಯ ಲಘು ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಬೆನ್ನಲ್ಲೇ, ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ...