ಪ್ರಶಾಂತ್ ಕಿಶೋರ್ ಚುನಾವಣಾ ಭವಿಷ್ಯ ‘ಹಾಸ್ಯಾಸ್ಪದ, ಬಿಜೆಪಿ ಪ್ರಾಯೋಜಿತ’ ಎಂದ ಕಾಂಗ್ರೆಸ್

Date:

Advertisements

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ, ಪಶ್ಚಿಮ ಬಂಗಾಳದಲ್ಲಿ ನಂಬರ್ 1 ಪಕ್ಷವಾಗಲಿದೆ ಎಂಬ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಭವಿಷ್ಯವನ್ನು ಕಾಂಗ್ರೆಸ್ “ಹಾಸ್ಯಾಸ್ಪದ ಮತ್ತು ಬಿಜೆಪಿ ಪ್ರಾಯೋಜಿತ” ಎಂದು ಕರೆದಿದೆ.

ಈ ಬಗ್ಗೆ ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ಅಜಯ್ ಕುಮಾರ್, “ಪ್ರಶಾಂತ್ ಕಿಶೋರ್ ಒಬ್ಬ ರಾಜಕೀಯ ವಿಶ್ಲೇಷಕನಂತೆ ಮಾರುವೇಷದಲ್ಲಿರುವ ಆರ್‌ಎಸ್‌ಎಸ್‌ನ ವ್ಯಕ್ತಿ. ನೀವು ಇದನ್ನು ಬಿಜೆಪಿ ಪ್ರಾಯೋಜಿತ ಕಾರ್ಯಕ್ರಮ ಎಂದೇ ಕರೆಯಬೇಕಾಗುತ್ತದೆ” ಎಂದು ಹೇಳಿದರು.

ಆದರೆ ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ ಮಾತ್ರ ಕಾಂಗ್ರೆಸ್‌ನ ಈ ಆರೋಪವನ್ನು ತಳ್ಳಿಹಾಕಿದ್ದು, “ಯಾರು ಸತ್ಯ ಹೇಳುತ್ತಾರೋ ಅವರನ್ನು ಆರ್‌ಎಸ್‌ಎಸ್ ಎಂದು ಕರೆಯಲಾಗುತ್ತದೆ” ಎಂದಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಪ್ರಶಾಂತ್ ಕಿಶೋರ್ ಚುನಾವಣಾ ಸಮೀಕ್ಷೆ ಸುಳ್ಳಾಗಿಲ್ಲವೇ, ಇದು ಬಿಜೆಪಿಯ ಮೈಂಡ್‌ ಗೇಮ್‌ ಅಲ್ಲವೇ?

ಇನ್ನು “ಕಾಂಗ್ರೆಸ್ ಮೈತ್ರಿಕೂಟದಲ್ಲಿದ್ದಾಗ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ಅಸ್ಥಿರಗೊಳಿಸಲು ಕಿಶೋರ್ ಪ್ರಯತ್ನಿಸಿದ್ದು, ನಿತೀಶ್ ಬಿಜೆಪಿ ಮೈತ್ರಿಕೂಟಕ್ಕೆ ಸೇರಿದ ದಿನದಿಂದಲೇ ತನ್ನ ಬಿಹಾರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ನಿಲ್ಲಿಸಿದರು” ಎಂದು ಕೂಡಾ ಅಜಯ್ ಕುಮಾರ್ ಆರೋಪಿಸಿದರು.

ತಮಿಳುನಾಡು ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಅಜಯ್ ಕುಮಾರ್ “ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಶಕ್ತಿ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಆಗಾಗ ಭೇಟಿ ನೀಡುತ್ತಿರುವುದು ಆಡಳಿತಾರೂಢ ಡಿಎಂಕೆ ಮೈತ್ರಿಕೂಟದ ನಿರೀಕ್ಷೆಯನ್ನು ಹೆಚ್ಚಿಸಲಿದೆ” ಎಂದು ಹೇಳಿದರು.

“ಚುನಾವಣೆಗೂ ಮುನ್ನ ಪ್ರಧಾನಿ ಮೋದಿಯವರಂತೆ ಯಾವ ಪ್ರಧಾನಿಯೂ ವಿಶ್ವಾಸಾರ್ಹತೆ ಕಳೆದುಕೊಂಡಿಲ್ಲ” ಎಂದು ಟೀಕಿಸಿದ ಅಜಯ್ ಕುಮಾರ್, “ಬಿಜೆಪಿಯು ರಾಜಕೀಯ ಭಾಷಣವನ್ನು ಬೀದಿ ಜಗಳವನ್ನಾಗಿಸಿದೆ. ಬಿಜೆಪಿ ಆಧಾರವಿಲ್ಲದ ವಿಷಯವನ್ನು ಮಾತ್ರ ಮಾತನಾಡುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನು ಓದಿದ್ದೀರಾ?   ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಜಗನ್‌ಗೆ ದೊಡ್ಡ ಸೋಲು: ಪ್ರಶಾಂತ್ ಕಿಶೋರ್

ಇನ್ನು ಪ್ರಧಾನಿ ಮೋದಿಯಂತೆ ಕಾಂಗ್ರೆಸ್ ನಾಯಕತ್ವ ತಮಿಳುನಾಡಿನಲ್ಲಿ ಪ್ರಚಾರ ನಡೆಸುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ, ಏಪ್ರಿಲ್ 12 ರಂದು ರಾಹುಲ್ ಗಾಂಧಿ ತಮಿಳುನಾಡಿನ ಕೊಯಮತ್ತೂರು ಮತ್ತು ತಿರುನಲ್ವೇಲಿಯಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ತಮಿಳುನಾಡು, ಪುದುಚೇರಿಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಎಲ್ಲ ಸ್ಥಾನ

“ತಮಿಳುನಾಡು ಮತ್ತು ಪುದುಚೇರಿಯ ಎಲ್ಲಾ 40 ಸ್ಥಾನಗಳನ್ನು ಇಂಡಿಯಾ ಒಕ್ಕೂಟ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ ಅಜಯ್ ಕುಮಾರ್ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗಮನಾರ್ಹವಾಗಿ ಗೆಲುವು ಸಾಧಿಸುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X