ಬರಿಗೈಯಲ್ಲಿ ಬಂದಿರಾ?; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Date:

ಮೈಸೂರಿಗೆ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಭೇಟಿ ನೀಡಲಿದ್ದು, ಅವರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ‘ಬರಿಗೈಯಲ್ಲಿ ಬಂದಿರಾ?’ ಪೊಸ್ಟರ್ ಅಭಿಯಾನ ನಡೆಸುತ್ತಿದೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯದಲ್ಲಿ ‘ನನ್ನ ತೆರಿಗೆ ತನ್ನ ಹಕ್ಕು’ ಅಭಿಯಾನ ನಡೆಯುತ್ತಿದೆ. ಅಲ್ಲದೆ, ರಾಜ್ಯದಲ್ಲಿ ಬರ ಎದುರಾಗಿದೆ. ಬರ ಘೋಷಣೆಯಾಗಿದ್ದರೂ, ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲವೆಂದು ಕಾಂಗ್ರೆಸ್‌ ಆರೋಪಿಸಿದೆ. ಹೀಗಾಗಿ, ರಾಜ್ಯಕ್ಕೆ ಭೇಟಿ ನೀಡುತ್ತಿರುವ ಅಮಿತ್ ಶಾ ಅವನ್ನು ‘ಬರಿಗೈಯಲ್ಲಿ ಬಂದಿರಾ?’ ಎಂದು ಕಾಂಗ್ರೆಸ್‌ ಟೀಕಿಸುತ್ತಿದೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಮೈಸೂರು ಗ್ರಾಮಾಂತರ ಕಾಂಗ್ರೆಸ್‌ ಅಧ್ಯಕ್ಷ ಡಾ. ಬಿ ಜೆ ವಿಜಯ ಕುಮಾರ್ ನೇತೃತ್ವದಲ್ಲಿ ಪೋಸ್ಟರ್‌ ಅಭಿಯಾನ ನಡೆಯುತ್ತಿದೆ. ‘ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?’ ಎಂಬ ಸಾಲಿನ ಜೊತೆಗೆ, ‘ಆದರೂ ಅಮಿತ್‌ ಶಾ ಅವರಿಗೆ ಸ್ವಾಗತ. ಕನ್ನಡ ನಾಡಲ್ಲಿ ಅತಿಥ್ಯಕ್ಕೆ ಬರವಿಲ್ಲ. ದ್ರೋಹಿಗಳನ್ನು ಕ್ಷಮಿಸೋಕೆ ಇಲ್ಲಾರಿಗೂ ಮರೆವಿಲ್ಲ’ ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮಿತ್ ಶಾ ರಾಜ್ಯ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ?” ಎಂದು ಕುಟುಕಿದ್ದಾರೆ.

“ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ” ಎಂದು ಪ್ರಶ್ನಿಸಿದ್ದಾರೆ.

“ಹುಬ್ಬಳ್ಳಿ-ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಾಂಪ್ರದಾಯಿಕ ಮೀನುಗಾರ ಶಿವಶಂಕರ ಗುಜ್ಜರಬೆಟ್ಟುಗೆ ರಾಷ್ಟ್ರೀಯ ಪುರಸ್ಕಾರ 

ಏಷಿಯನ್ ಫಿಷರೀಸ್ ಸೊಸೈಟಿ ಇಂಡಿಯನ್ ಬ್ರಾಂಚ್ ಪ್ರಾಯೋಜಿತ ಪ್ರೊಫೆಸರ್ ಡಾ ಎಂ...

ಶಿವಮೊಗ್ಗ | ನಕ್ಸಲ್ ಹೋರಾಟಗಾರ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿದ್ದು,...

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...