ಮಹಾರಾಷ್ಟ್ರ ಚುನಾವಣೆ | ಕರ್ನಾಟಕದ ಮದ್ಯದಂಗಡಿಗಳಿಂದ 700 ಕೋಟಿ ರೂ. ಸಂಗ್ರಹಿಸಿದ ಕಾಂಗ್ರೆಸ್‌: ಮೋದಿ ಆರೋಪ

Date:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂ. ಸಂಗ್ರಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದ್ದಾರೆ.

- Advertisement -

ಮಹಾರಾಷ್ಟ್ರದ ಅಕೋಲಾದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪರ ಚುನಾವಣಾ ಪ್ರಚಾರವನ್ನು ನಡೆಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಮಹಾರಾಷ್ಟ್ರ ಚುನಾವಣೆ ನೆಪದಲ್ಲಿ ಕರ್ನಾಟಕದಲ್ಲಿ ವಸೂಲಿ ಹೆಚ್ಚಾಗಿದೆ ಎಂದು ಜನರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಕರ್ನಾಟಕದ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂಬ ಆರೋಪವಿದೆ” ಎಂದು ಹೇಳಿದ್ದಾರೆ.

“ಚುನಾವಣೆ ಇರುವುದು ಮಹಾರಾಷ್ಟ್ರದಲ್ಲಿ, ಆದರೆ ವಸೂಲಿ ದುಪ್ಪಟ್ಟಾಗಿರುವುದು ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ನಾಯಕರಿಂದ ವಕ್ಫ್ ಆಸ್ತಿ ಲೂಟಿ, ಹೀಗಾಗಿ ಆಸ್ತಿ ಸಂರಕ್ಷಿಸುತ್ತೇವೆ ಎಂದಿದ್ದೆವು: ಪ್ರಲ್ಹಾದ್‌ ಜೋಶಿ

“ಕಾಂಗ್ರೆಸ್ ಎಲ್ಲೇ ಸರ್ಕಾರ ರಚಿಸಿದರೂ ಕೂಡಾ ಆ ರಾಜ್ಯವು ಕಾಂಗ್ರೆಸ್‌ನ ಶಾಹಿ ಪರಿವಾರ (ರಾಜವಂಶ) ಎಟಿಎಂ ಆಗುತ್ತದೆ. ಇತ್ತೀಚೆಗೆ ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಕಾಂಗ್ರೆಸ್‌ನ ಈ ರಾಜವಂಶದ ಎಟಿಎಂಗಳಾಗಿವೆ” ಎಂದು ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಇನ್ನು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ವಿರುದ್ಧವೂ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

“ಮಹಾ ಅಘಾಡಿ ಎಂದರೆ ಭ್ರಷ್ಟಾಚಾರ, ಬಹುಕೋಟಿ ಹಗರಣ, ಸುಲಿಗೆ ಮತ್ತು ಟೋಕನ್ ಹಣ ಎಂದು ಇಡೀ ದೇಶಕ್ಕೆ ತಿಳಿದಿದೆ” ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...