- 200 ಯುನಿಟ್ ವಿದ್ಯುತ್ ಉಚಿತವೆಂದು ಭರವಸೆ ನೀಡಿದ್ದ ಕಾಂಗ್ರೆಸ್
- ವಿದ್ಯುತ್ ಬಿಲ್ ಸಂಗ್ರಹಿಸಲು ಹೋಗಿದ್ದಾಗ ಹಿಂದಕ್ಕೆ ಕಳಿಸಿ ಗ್ರಾಮಸ್ಥರು
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಸಂಗ್ರಹಿಸಲು ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ ಪ್ರತಿನಿಧಿ ಗೋಪಿ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು, “ವಿದ್ಯುತ್ ಉಚಿತ ಎಂದು ಕಾಂಗ್ರೆಸ್ ಭರವಸೆ ನೀಡಿದೆ. ಆ ಕಾರಣದಿಂದಾಗಿ ನಾವು ಬಿಲ್ ಪಾವತಿಸುವುದಿಲ್ಲ” ಎಂದು ಹೇಳಿದ್ದಾರೆ.
“ಆದೇಶ ಬರುವವರೆಗೂ ಹಣ ಪಾವತಿಸಬೇಕು. ಅವ್ರು ಉಚಿತವಾಗಿ ಕೊಟ್ರೆ ನಾವು ಕೊಡ್ತಿವಿ. ಆದರೆ ಕಳೆದ ತಿಂಗಳ ವಿದ್ಯುತ್ ಬಿಲ್ ಪಾವತಿಸಲೇ ಬೇಕು” ಎಂದು ಗ್ರಾಮ ವಿದ್ಯುತ್ ಪ್ರತಿನಿಧಿ ವಿವರಿಸಿದ್ದಾರೆ. ಆದರೆ, ಅವರ ಮಾತಿಗೆ ಜಗ್ಗದ ಗ್ರಾಮಸ್ಥರು “ಆದೇಶದ ಬಗ್ಗೆ ಕಾಂಗ್ರೆಸ್‌ನವರಿಗೆ ಕೇಳಿ. ಗ್ರಾಮದಲ್ಲಿ ಯಾರು ಈ ತಿಂಗಳಿನಿಂದ ಹಣ ಪಾವತಿಸುವುದಿಲ್ಲ” ಗ್ರಾಮದಿಂದ ಕಳುಹಿಸಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಭರವಸೆ ನೀಡಿತ್ತು.
ಈ ಸುದ್ದಿ ಓದಿದ್ದೀರಾ? ದಲಿತ ಸಿಎಂ ಚರ್ಚೆ ಮುನ್ನೆಲೆಗೆ | 30% ಜನಸಂಖ್ಯೆ ಇರುವ ದಲಿತರಿಗೆ ಸಿಎಂ ಸ್ಥಾನ ಕೊಡಿ; ಆಂದೋಲನ ಆರಂಭ