ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದೂರು

Date:

  • ಭಯೋತ್ಪಾದಕರ ಪರ ಕಾಂಗ್ರೆಸ್ ಎಂದಿದ್ದ ಪ್ರಧಾನಿ ಮೋದಿ
  • ಬಳ್ಳಾರಿಯಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ಗಂಭೀರ ಆರೋಪ

ಕಾಂಗ್ರೆಸ್ ಭಯೋತ್ಪಾದನೆಯನ್ನು ಪೋಷಿಸಿದೆ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

ಬಳ್ಳಾರಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಯೋತ್ಪಾದಕರ ವಿರುದ್ಧ ಮಾತನಾಡುವುದಿಲ್ಲ. ಭಯೋತ್ಪಾದಕರ ಕುರಿತು ಮೃದು ದೋರಣೆ ಹೊಂದಿದೆ” ಎಂದು ಹೇಳಿದ್ದಾರೆ.

ಈ ಕುರಿತಾಗಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. “ಮೋದಿ ಮತದಾರರನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವನ್ನು ಮೋದಿ ಭಯೋತ್ಪಾದಕರಿಗೆ ಬೆಂಬಲಿಸಿದೆ ಎಂದು ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“140 ವರ್ಷಗಳಷ್ಟು ಹಳೆಯದಾದ ಮತ್ತು ಸಾರ್ವಜನಿಕರ ಸೇವೆ ಮಾಡಿಕೊಂಡ ಪಕ್ಷಕ್ಕೆ ಮೋದಿ ಕಳಂಕ ತರಲು ಯತ್ನಿಸಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಮೋದಿ ಸೂಕ್ಷ್ಮತೆ ಇಲ್ಲದೆ ಮಾತನಾಡಿದ್ದಾರೆ” ಎಂದು ದೂರಲಾಗಿದೆ.

“ಮೋದಿ ಅವರು ತಮ್ಮ ಭಾಷಣದ ಮೂಲಕ 1951ರ ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಸೆಕ್ಷನ್ 123 (2), 123 (3A), 123 (4) ಮತ್ತು ಭಾರತೀಯ ದಂಡ ಸಂಹಿತೆ, 1860ರ ಸೆಕ್ಷನ್ 153ಎ, 153ಬಿ, 171ಸಿ, 171ಜಿ, 499, 500, 504, 505 (2) ಉಲ್ಲಂಘಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

ಮೋದಿ ಭಾಷಣ

ಬಳ್ಳಾರಿಯ ಬೃಹತ್ ಸಮಾವೇಶದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, “ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‌ಗಾಗಿ ಭಯೋತ್ಪಾದನೆಯನ್ನು ರಕ್ಷಿಸಿದೆ” ಎಂದು ಆರೋಪಿಸಿದ್ದಾರೆ.

“ಭಯೋತ್ಪಾದಕರ ಬೆಂಬಲಕ್ಕೆ ಕಾಂಗ್ರೆಸ್ ನಿಂತಿರುವ ಪ್ರವೃತ್ತಿ ದೇಶದ ದುರಂತ. ಕಾಂಗ್ರೆಸ್ ತನ್ನ ಲಾಭಕ್ಕಾಗಿ ಹಿಂಬಾಗಿಲಿನಿಂದ ಭಯೋತ್ಪಾದನೆಗೆ ಸಹಕಾರ ನೀಡಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ...

ಉಪಚುನಾವಣೆ ಫಲಿತಾಂಶ | 13ರ ಪೈಕಿ 10ರಲ್ಲಿ ಗೆದ್ದ ‘ಇಂಡಿಯಾ’; ಎನ್‌ಡಿಎಗೆ ಕೇವಲ 2 ಸ್ಥಾನ

ಲೋಕಸಭಾ ಚುನಾವಣೆಯಲ್ಲಿನ ಪ್ರಬಲ ಪ್ರದರ್ಶನವನ್ನು ಮುಂದುವರೆಸಿರುವ 'ಇಂಡಿಯಾ' ಮೈತ್ರಿಕೂಟ ಏಳು ರಾಜ್ಯಗಳ...

ಜಮ್ಮು-ಕಾಶ್ಮೀರ | ‘ಹುತಾತ್ಮರ ದಿನ’ ಆಚರಣೆಗೆ ತಡೆ; ಹಲವು ನಾಯಕರಿಗೆ ಗೃಹಬಂಧನ

'ಹುತಾತ್ಮರ ದಿನಾಚರಣೆ' ಆಚರಿಸಲು ಶ್ರೀನಗರದ ಡೌನ್‌ಟೌನ್‌ಲ್ಲಿರುವ ಹುತಾತ್ಮರ ಸ್ಮಶಾಕಕ್ಕೆ ತೆರಳಲು ನಮಗೆ...