ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ: ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು

Date:

ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ. ಆದ್ದರಿಂದ ಸುಳ್ಳು ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಪೊಲೀಸ್ ದೂರು ನೀಡಿದ್ದಾರೆ.

- Advertisement -

ಯತ್ನಾಳ್ ಮಹಾತ್ಮ ಗಾಂಧಿಯವರ ಹತ್ಯೆಗೆ ಮಾಜಿ ಪ್ರಧಾನಿ ನೆಹರೂ ಕಾರಣ ಎಂದು ಅಪಪ್ರಚಾರದ ಮತ್ತು ಸುಳ್ಳು ಹೇಳಿಕೆ ನೀಡಿ ನೆಹರು ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ. ಪ್ರತೀ ಬಾರಿಯೂ ಅವರು ರಾಜ್ಯದ ಜನತೆಗೆ ತಪ್ಪು ಸಂದೇಶಗಳನ್ನು ರವಾನಿಸಿ ಸುಳ್ಳು ಪ್ರಚಾರ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸುತ್ತಿದ್ದಾರೆ ಎಂದು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಮನೋಹರ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಇತ್ತೀಚೆಗೆ ಮಹಾತ್ಮ ಗಾಂಧಿಯವರನ್ನು ಕೊಂದಿದ್ದು ಗೋಡ್ಸೆ ಎಂಬ ವಿಷಯದ ಕುರಿತು ಹೇಳಿಕೆ ನೀಡಿರುವ ಯತ್ನಾಳ್, ಗಾಂಧಿಯ ದೇಹದಲ್ಲಿ ಒಂದು ಗುಂಡು ಗೋಡ್ಸೆ ಹೊಡೆದಿದ್ದು ಎಂದು ಸಾಬೀತಾಗಿದೆ. ಇನ್ನೆರಡು ಗೋಲಿಯನ್ನು (ಗುಂಡುಗಳನ್ನು) ನೆಹರೂ ಹೊಡೆಸಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ನೆಹರೂ ಸರ್ವಾಧಿಕಾರಿ ಆಗಬೇಕೆಂದು ಮಹಾತ್ಮ ಗಾಂಧಿಯವರನ್ನು ಕೊಲ್ಲಿಸಿದರು ಎಂದು ಹೇಳಿರುವ ಯತ್ನಾಳ್ ಅವರ ಆಧಾರಹಿತ ಹೇಳಿಕೆ ದೇಶದ ಹಾಗೂ ರಾಜ್ಯದ ಜನರಲ್ಲಿ ತಪ್ಪು ಕಲ್ಪನೆ ಉಂಟಾಗುತ್ತಿದೆ. ಆದ್ದರಿಂದ ದೇಶಕ್ಕಾಗಿ ಹೋರಾಡಿ ಜೈಲುವಾಸ ಅನುಭವಿಸಿದ್ದ ಮಾಜಿ ಪ್ರಧಾನಿ ನೆಹರೂ ಬಗ್ಗೆ ಅಪಪ್ರಚಾರ ಮಾಡಿರುವ ಹಾಗೂ ಮಹಾತ್ಮ ಗಾಂಧಿಯವರ ಸಾವಿನ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಕೂಡಲೇ ಬಂಧಿಸಬೇಕು, ಇಂತಹ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ಅವರ ವಿರುದ್ಧ ಕಠಿಣ ಕಾನೂನು ಕೈಗೊಳ್ಳಬೇಕು ಎಂದು ಪೊಲೀಸ್ ದೂರಿನಲ್ಲಿ ಮನೋಹರ್ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...